ಬರಲು ರೆಡಿಯಾದ ಮಹಿಷಾಸುರ

ಇದು ತ್ರಿಕೋನ ಪ್ರೇಮ‌ಕತೆಯ ಸಮರ

ಹೊಸಬರ ಮಹಿಷಾಸುರ ತೆರೆಗೆ ಬರಲು ರೆಡಿಯಾಗಿದ್ದಾನೆ. ಅಂದ ಹಾಗೆ ,ಇದು ಮೆಳೆಕೋಟೆ ಮತ್ತು ಮೈತ್ರಿ ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಾಣವಾದ ಮಹಿಷಾಸುರ ಚಿತ್ರದ ಸದ್ಯದ ವಿಚಾರ. ಸದ್ಯಕ್ಕೆ ಈ ಚಿತ್ರದ ಬಿಡುಗಡೆ ದಿನಾಂಕ‌ ಫಿಕ್ಸ್ ಆಗಿಲ್ಲ. ಆದರೆ ಸದ್ಯದಲ್ಲಿಯೇ ಚಿತ್ರವನ್ನು ಚಿತ್ರಮಂದಿರಕ್ಕೆ ತರಲು ಚಿತ್ರ ತಂಡ ಸಜ್ಜಾಗಿದೆ.
ಈಗಾಗಲೇ ಚಿತ್ರದ ಟ್ರೇಲರ್ ಕೂಡ ಹೊರಬಂದಿದೆ. ಜತೆಗೆ ಸೆನ್ಸಾರ್ ಮುಗಿದು , ಅಲ್ಲಿಂದ ಯು /ಎ ಪ್ರಮಾಣ ಪತ್ರ ಸಿಕ್ಕಿದೆ.‌ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಮೆಚ್ಚುಗೆಯ ಮಾತು ಹೇಳಿದ್ದು, ಚಿತ್ರತಂಡಕ್ಕೂ ಖುಷಿ ಕೊಟ್ಟಿದೆ. ಇನ್ನು ಚಿತ್ರದ ಕತೆ ಮತ್ತು ತಾರಾಗಣ ಎಲ್ಲವೂ ಹೊಸತು. ಚಿತ್ರದ ಶೀರ್ಷಿಕೆಯೇ ಹೇಳುವ ಹಾಗೆ ಇದೊಂದು ಸೇಡಿನ ಕತೆ. ಅದು ಪ್ರೇಮದ ಸುತ್ತಲ ಸಮರ. ಅದಕ್ಕೆತ್ರಿಕೋನ ಪ್ರೇಮಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ‌.ನಿರ್ದೇಶಕರು.

ಅವರ ಪ್ರಕಾರ ಇದು ನಿಜ ಜೀವನದಲ್ಲಿ ನಡೆದ ಘಟನೆ. ಅದರ ಸುತ್ತ ಸಿನಿಮಾ ಅಂಶಗಳನ್ನು ಸೇರಿಸಿದ್ದಾರಂತೆ. ನಿರ್ದೇಶಕ ಉದಯ ಪ್ರಸನ್ನ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ‌ಬರೆದು, ನಿರ್ದೇಶನ ಮಾಡಿದ್ದಾರಂತೆ. ಲೀಲಾವತಿ ಸುರೇಶ್ ಕುಮಾರ್, ಪ್ರೇಮಾ ಚಂದ್ರಯ್ಯ ನಾಗಸಂದ್ರ, ಮೈತ್ರಿ ಮಂಜುನಾಥ್ ಸೇರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಹೊಸ ಪ್ರತಿಭೆಗಳಾದ ಅರ್ಜುನ್, ಬಿಂದುಶ್ರೀ, ಮಂಜು‌ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ಅವರೊಂದಿಗೆ ರಘು ಪಾಂಡೇಶ್ವರ, ರಾಕ್ ಲೈನ್ ಸುಧಾಕರ್, ಮಾಸ್ಟರ್ ತುಷಾರ್, ಮಾಸ್ಟರ್ ಸುಜಿತ್, ರವಿಚಂದ್ರ ಮುಂತಾದವರ ತಾರಾಬಳಗವಿದೆ.

ಚಿತ್ರಕ್ಕೆ ಸುನಿಲ್ ಕೌಶಿಕ್, ಸಾಯಿಕಿರಣ್ ಸಂಗೀತ, ಕೃಷ್ಣ ಛಾಯಾಗ್ರಹಣ, ರಾಘವೇಂದ್ರ ವಿ. ಹಿನ್ನೆಲೆ ಸಂಗೀತ, ವೆಂಕಿ ಡಿವಿಡಿ ಸಂಕಲನ, ರಾಕಿ ರಮೇಶ್ ಸಾಹಸ, ಸುಜಿತ್ ಕಿಶೋರ್ ನೃತ್ಯ ನಿರ್ದೇಶನ, ವಿರಾಟ್ ರಾಜು ಸಂಭಾಷಣೆ ಚಿತ್ರಕ್ಕಿದೆ.‌ಎಲ್ಲವೂ ಅಂದುಕೊಂಡಂತಾದರೆ ಈ ಚಿತ್ರವು ನವೆಂಬರ್ ಕೊನೆ ವಾರ, ಇಲ್ಲವೇ ಡಿಸೆಂಬರ್‌ ಮೊದಲ‌ವಾರದಲ್ಲೇ ತೆರೆಗೆ ಬರಲಿದೆಯಂತೆ.

Related Posts

error: Content is protected !!