-
ಒಂದೇ ಲೊಕೇಷನ್, ಐದು ದಿನ ಚಿತ್ರೀಕರಣ – –ಕನ್ನಡದಲ್ಲೊಂದು ಇದು ವಿಭಿನ್ನ ಪ್ರಯೋಗ
5 ದಿನ ರಾತ್ರಿ ಹಗಲು ಚಿತ್ರೀಕರಣ
‘ಕಿರಗೂರಿನ ಗಯ್ಯಾಳಿಗಳು’ ಖ್ಯಾತಿಯ ಮಾನಸ ಜೋಶಿ ವಿಭಿನ್ನ ಕಥೆ, ಪಾತ್ರವಿರುವ ‘ಎವಿಡೆನ್ಸ್’ ಚಿತ್ರ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಮೊನ್ನೆಯಷ್ಟೇ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಈಗ ಆ ಚಿತ್ರ ಪೂರ್ಣಗೊಂಡಿದೆ.
ಹೌದು ಹೊಸ ಗೆಟಪ್ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವ ಮಾನಸ ಜೋಶಿ ಅವರ ‘ಎವಿಡೆನ್ಸ್’ ಚಿತ್ರಕ್ಕೆ ಪ್ರವೀಣ್ (ಪಿ ಆರ್) ನಿರ್ದೇಶಕರು. ಅವರದೇ ಶ್ರೀ ಧೃತಿ ಪ್ರೊಡಕ್ಷನ್ ಮೂಲಕ ತಯಾರಾಗುತ್ತಿರುವ ‘ಎವಿಡೆನ್ಸ್’ ಚಿತ್ರಕ್ಕೆ ಅರವಿಂದ್ ಕುಮಾರ್, ಸುರೇಂದ್ರ ಶೆಟ್ಟಿ, ನರಸಿಂಹಮೂರ್ತಿ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕೇವಲ ಎರಡು ಮುಖ್ಯ ಪಾತ್ರಗಳಿವೆ.
ಮಾನಸ ಜೋಶಿ ಜೊತೆ ರೋಬೊ ಗಣೇಶ್ ನಟಿಸುತ್ತಿದ್ದಾರೆ. ಅವರಿಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದರೆ, ಮಾನಸ ಜೋಶಿ ಮೊದಲ ಸಲ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಕಥೆಯಾಗಿದ್ದು, ಒಂದೇ ರೂಮ್ ನಲ್ಲಿ ಕಥೆ ನಡಯಲಿದೆ. ಎರಡು ತಾಸು ಇಡೀ ಚಿತ್ರ ಒಂದೇ ರೂಮ್ ನಲ್ಲಿ ಸಾಗಲಿದೆ ಎಂಬುದು ವಿಶೇಷ. ಆ ರೂಮ್ ನಲ್ಲೇ ಚಿತ್ರೀಕರಣ ಮಾಡಿ ಮುಗಿಸಿರುವ ನಿರ್ದೇಶಕರು, ಸದ್ಯ ಎಡಿಟಿಂಗ್, ಡಬ್ಬಿಂಗ್ ಕಡೆ ಗಮನ ಹರಿಸಿದ್ದಾರೆ.
ಕನ್ನಡಕ್ಕೊಂದು ವಿಭಿನ್ನ ಪ್ರಯತ್ನದ ಸಿನಿಮಾ ಆಗಿರುವುದರಿಂದ ಚಿತ್ರಮಂದಿರ ಶುರುವಾಗುತ್ತಿದ್ದಂತೆಯೇ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದ್ದಾರೆ.ಇನ್ನು ಈ ಚಿತ್ರಕ್ಕೆ ರವಿಸುವರ್ಣ ಛಾಯಾಗ್ರಹಣವಿದೆ. ಇದು ಅವರ 25ನೇ ಚಿತ್ರ ಎಂಬುದು ಮತ್ತೊಂದು ವಿಶೇಷ.ಚಿತ್ರಕ್ಕೆ ಆರ್. ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆದಿದ್ದಾರೆ. ಕಾರ್ತಿಕ್ ವೆಂಕಟೇಶ್ ಸಂಗೀತ, ಸಾಹಿತ್ಯವಿದೆ.