ರತ್ನನ್ ಪ್ರಪಂಚದಲ್ಲಿ  ಗಟ್ಟಿಗಿತ್ತಿ ಗೌಡ್ತಿಯಾಗಿ‌ ನಟಿ ತಾರಾ

ನಟಿ ತಾರಾ ಕನ್ನಡ ಚಿತ್ರರಂಗದ ಹಿರಿಯ ನಟಿ. ನೂರಾರು ಅಧಿಕ ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು. ಒಂದಕ್ಕಿಂತ ಒಂದು ಭಿನ್ನ ವಿಭಿನ್ನ ಪಾತ್ರವನ್ನು ಪೋಷಿಸುತ್ತ ಬಂದಿದ್ದಾರವರು. ಆದರೆ, ಆ ಒಂದು ಪಾತ್ರವನ್ನು ಬಿಟ್ಟು! ಅದುವೇ ಗಟ್ಟಿಗಿತ್ತಿ ಗೌಡತಿ ಪಾತ್ರ. ಹೌದು, ಅಂಥ ಒಂದು ವಿಶೇಷ ಪಾತ್ರವನ್ನು ಡಾಲಿ ಧನಂಜಯ್ ನಟಿಸುತ್ತಿರುವ ‘ರತ್ನನ್​ ಪ್ರಪಂಚ’ ಚಿತ್ರ ಅವರಿಗೆ ಕರುಣಿಸಿದೆ.

ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ನಿರ್ಮಾಣ ಮಾಡುತ್ತಿರುವ ರತ್ನನ್​ ಪ್ರಪಂಚ ಸಿನಿಮಾವನ್ನು ‘ದಯವಿಟ್ಟು ಗಮನಿಸಿ’ ಸಿನಿಮಾ ಖ್ಯಾತಿಯ ರೋಹಿತ್​ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅತೀ ವಿಶೇಷವಾದ ಪಾತ್ರದಲ್ಲಿ ತಾರಾ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕ ಮೂಲದ ಊರೊಂದರ ಗಟ್ಟಿಗಿತ್ತಿ ಗೌಡತಿಯಾಗಿ ಅವರನ್ನು ತೋರಿಸುತ್ತಿದ್ದಾರೆ ನಿರ್ದೇಶಕರು.


‘ಕಥೆಯ ಒಂದೆಳೆ ಹೇಳುತ್ತಿದ್ದಂತೆ, ನನಗೆ ಇಷ್ಟವಾಯ್ತು.ಆದರೆ ಜೊತೆಗೆ ಆಳಕು ಆಯ್ತು..ಅದರಲ್ಲೂ ನಾನು ಈ ರೀತಿಯ ಪಾತ್ರವನ್ನು ಇಲ್ಲಿಯವರೆಗೂ ಮಾಡಿಲ್ಲ. ಖಡಕ್​ ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡುವ ಹೆಣ್ಣುಮಗಳಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಹಿಳೆಯಾಗಿ ನನ್ನ ಪಾತ್ರ ಸಾಗಲಿದೆ. ನೆಗೆಟಿವ್​ ಶೇಡ್​ ಅಲ್ಲದ, ದೇವತೆಯಂತೆ ಬಿಂಬಿಸುವ ಪಾತ್ರ ಇದು. ಇಂಥ ಪಾತ್ರ ನೀಡಿದಕ್ಕೆ ನಿರ್ದೇಶಕರಿಗೆ ನನ್ನ ಧನ್ಯವಾದ’ ಎನ್ನುವ ತಾರಾ, ಉತ್ತರ ಕರ್ನಾಟಕ ಭಾಷೆ ಕಲಿಯುವುದಕ್ಕೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಇಡೀ ಸಿನಿಮಾದಲ್ಲಿ ತಾರಾ ಪಾತ್ರ ಮುಖ್ಯವಾಗಿರುವುದರಿಂದ ಬಹುಪಾಲು ಸಿನಿಮಾದಲ್ಲಿ ಅವರೂ ಕಾಣಿಸಿಕೊಳ್ಳುತ್ತಾರೆ. ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿಯೇ ಸಂಭಾಷಣೆ ಒಪ್ಪಿಸಬೇಕಿರುವುದರಿಂದ ಅದಕ್ಕಾಗಿ ತಯಾರಿ ನಡೆಸಿದ್ದಾರೆ. ಆ ಸೊಗಡನ್ನು ಉಚ್ಚರಿಸುವುದಕ್ಕೆ ತರಬೇತಿಯನ್ನೂ ಪಡೆದುಕೊಳ್ಳುತ್ತಿದ್ದಾರೆ.

” ‘ಈವರೆಗೂ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದೇನೆ. ಪ್ರತಿ ಪಾತ್ರದಲ್ಲಿಯೂ ಕಲಿಯುವುದಕ್ಕೆ ಸಾಕಷ್ಟಿತ್ತು. ಇಷ್ಟು ವರ್ಷಗಳಾದರೂ ಈಗಲೂ ನನಗೆ ಕಲಿಯುವುದಕ್ಕೆ ಇಂಥ ಪಾತ್ರಗಳ ಮೂಲಕ ಅವಕಾಶ ಸಿಗುತ್ತಿದೆ. ಆ ರೀತಿಯ ಪಾತ್ರ ಹಿಡಿದು ಬರುವ ನಿರ್ದೇಶಕರಿಗೆ, ನೀವೇ ನಟಿಸಬೇಕು ಎನ್ನುವ ನಿರ್ಮಾಪಕರಿಗೆ ನನ್ನ ನಮನಗಳು’’

–  ತಾರಾ

ಇನ್ನು ಲಾಕ್​ಡೌನ್​ ಮುಗಿಯುತ್ತಿದ್ದಂತೆ ಟಾಮ್​ ಆ್ಯಂಡ್​ ಜೆರ್ರಿ ಮತ್ತು ಬಡವ ರಾಸ್ಕಲ್ ಚಿತ್ರದ ಶೂಟಿಂಗ್​ ಮುಗಿಸಿರುವ ತಾರಾ, ನವೆಂಬರ್​ನಲ್ಲಿ ರತ್ನನ್​ ಪ್ರಪಂಚ ಸಿನಿಮಾದಲ್ಲಿ ಭಾಗಿಯಾಗಲಿದ್ದಾರೆ. ಇದರ ಜತೆಗೆ ಹೊಸದಾಗಿ ಐದಾರು ಚಲನಚಿತ್ರಗಳನ್ನೂ ಒಪ್ಪುಕೊಂಡಿದ್ದಾರೆ.

Related Posts

error: Content is protected !!