ಇಬ್ಬರ ನಡುವಿನ ಮುದ್ದಿನ ರಾಣಿ’ಗೆ ರೆಡಿ ಅಂದ್ರು ವೆಂಕಟ ರೆಡ್ಡಿ

ಬೆಳ್ಳಿತೆರೆಗೆ ಸೌರಭ್ ಕಿಶೋರ್ ಹೀರೋ ಆಗಿ ಎಂಟ್ರಿ

ಕೊರೋನಾ‌ ಆತಂಕ ದೂರವಾಗುತ್ತಿರುವ ಬೆನ್ಮಲೇ ಸಾಲು ಸಾಲು ಸಿನಿಮಾಗಳು ಸೆಟ್ಟೇರುತ್ತಿವೆ. ಇವೆಲ್ಲವೂ ಹೊಸಬರ ಸಿನಿಮಾ ಎನ್ನುವುದು ಇನ್ನೊಂದು ವಿಶೇಷ. ಈಗ ಆ ಸಾಲಿಗೆ ಮತ್ತೊಂದು ಸಿನಿಮಾ.ಅದರ ಹೆಸರು ‘ಇಬ್ಬರ ನಡುವಿನ ಮುದ್ದಿನ ರಾಣಿ‌’.
ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡುತ್ತಿದ್ದು, ಪಿ.ಎಂ.ಆರ್ ಕೋಣ್ಣಾರೆಡ್ಡಿ ಸಹ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ವಿಜಯ್ ಕುಮಾರ್ ಹಾಗೂ ಮಧುಬಾಬು ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ದೊಡ್ಡ ಬಳ್ಳಾಪುರದ ಅಂಗಸಾನ ರೆಸಾರ್ಟ್ ನಲ್ಲಿ ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ‌ನೀಡಿದರು. ಈ ಚಿತ್ರವೂ ಕನ್ನಡ ‌ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ‌‌ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಹಾಗೆಯೇ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ನಿರ್ದೇಶಕ ರಾಜಾ ಅವರು ಹೇಳುವ ಪ್ರಕಾರ, ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ 15 ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು‌ ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಇನ್ನು ಚಿತ್ರಕ್ಕೆ ನಿರ್ಮಾಪಕ ಸೌರಭ್ ಕಿಶೋರ್ ನಾಯಕರಾಗಿ ನಟಿಸುತ್ತಿದ್ದು , ಅವರೊಂದಿಗೆ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಟರಿ ವಾಸು, ಶೇಷಗಿರಿ,ರೆಡ್ಡಿ, ಲೋರ ಇದ್ದಾರೆ.

Related Posts

error: Content is protected !!