ಅನುರಾಗ ಸಂಗಮಕ್ಕೆ  25ವರ್ಷದ ಸಂಭ್ರಮ

ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಹೇಳಿದ ಕುಮಾರ್‌ ಗೋವಿಂದ್‌

 

ನಟ ಕುಮಾರ್‌ ಗೋವಿಂದ್‌  ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ” ಅನುರಾಗ ಸಂಗಮ” ಚಿತ್ರ. ಕುಮಾರ್‌ ಗೋವಿಂದ್‌, ರಮೇಶ್‌, ಸುಧಾರಾಣಿ ಹಾಗೂ ಬಿ. ಸರೋಜಾ ದೇವಿ ಅಭಿನಯದ ” ಅನುರಾಗ ಸಂಗಮ”  ಚಿತ್ರ ತೆರೆ ಕಂಡು ಸೋಮವಾರಕ್ಕೆ 25 ವಸಂತ ತುಂಬಿತು. ಇದೇಕಾರಣಕ್ಕೆ ನಟ ಕುಮಾರ್‌ ಗೋವಿಂದ್‌ ಸಂತಸ ವ್ಯಕ್ತಪಡಿಸಿದ್ದು, ಆಗ ಚಿತ್ರದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ವಿ. ಉಮಾಕಾಂತ್ ನಿರ್ದೇಶನದಲ್ಲಿ‌ ಮೂಡಿಬಂದಿದ್ದ ” ಅನುರಾಗ ಸಂಗಮ ” ಚಿತ್ರವು 1995ಡಿಸೆಂಬರ್ 8 ರಂದು ತೆರೆ ಕಂಡಿತ್ತು.‌

ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಈ ಚಿತ್ರವು ೨೫ ವಾರಗಳ ಯಶಸ್ವಿ ಪ್ರದರ್ಶನ ಕಂಡಿತ್ತು. ವಿ. ಮನೋಹರ್‌ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಎಸ್ ಪಿಬಿ ಹಾಗೂ ರಮೇಶ್‌ ಚಂದ್ರ ಹಾಡಿದ್ದ ಹಾಡುಗಳು ಈಗಲೂ ಬಲು ಜನಪ್ರಿಯ. ಅಷ್ಟೇ ಅಲ್ಲ, ಗಾಯಕ ರಮೇಶ್‌ ಚಂದ್ರ ಅವರಿಗೆ ಈ ಚಿತ್ರದ ಗೀತೆಯ ಮೂಲಕ ರಾಜ್ಯ ಪ್ರಶಸ್ತಿಯೂ ಬಂತು. ಭಾರತದ ಇತರ ಭಾಷೆಗಳಿಗೂ ಈ ಚಿತ್ರದ ರಿಮೇಕ್ ಹಕ್ಕು ಮಾರಾಟವಾಗಿ ಅಲ್ಲೂ ಯಶಸ್ವಿಯಾಗಿದೆ. ಎಸ್.ಕೆ ಫಿಲಂಸ್ ಮೂಲಕ ಡಿ. ಗೋವಿಂದಪ್ಪ ಈ ಚಿತ್ರ ನಿರ್ಮಾಣ ಮಾಡಿದ್ದರು. ನಟ ಕುಮಾರ್‌ ಗೋವಿಂದ್‌ ಆವರಿಗೂ ಈ ಚಿತ್ರ ಭರ್ಜರಿ ವರ್ಚಸ್ಸು ತಂದುಕೊಟ್ಟಿದ್ದು ಗಮನಾರ್ಹ.ಈ ಹಿನ್ನೆಲೆಯಲ್ಲಿ ಅವರು ಅಂದು ʼ ಅನುರಾಗ ಸಂಗಮʼ  ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ ನಟ ಕುಮಾರ್‌ ಗೋವಿಂದ್.

Related Posts

error: Content is protected !!