ನಿರ್ಮಾಪಕರ ಸಂಘದ ಬಹುದಿನದ ಕನಸು ನನಸಾಗುವ ಸಮಯ

ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ನಾಳೆ(ಡಿ.೧೦) ಶಂಕುಸ್ಥಾಪನೆ

ಸಾಂದಾರ್ಬಿಕ ಚಿತ್ರ

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಬಹುದಿನದ ಕನಸು ನನಸಾಗುತ್ತಿದೆ. ಸಂಘವು ತನ್ನದೇ ಸುಸಜ್ಜಿತವಾದ ಕಟ್ಟಡ ಹೊಂದಬೇಕೆನ್ನುವ ಬಹುದಿನದ ಆಸೆ ಕೊನೆಗೂ ಈಡೇರುತ್ತಿದೆ. ಬೆಂಗಳೂರಿನ ಶೇಷಾದ್ರಿಪುರಂನ ಶಿವಾನಂದ ಸರ್ಕಲ್‌ ಬಳಿ ಇರುವ ಸಂಘದ ಅಧಿಕೃತ ನಿವೇಶನದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ನಾಳೆ( ಡಿಸೆಂಬರ್‌ ೧೦) ಬೆಳಗ್ಗೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಚಿತ್ರೋದ್ಯಮಕ್ಕೆ ಸದಾ ಸಹಕಾರ ನೀಡುತ್ತಾ ಬಂದಿರುವ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಸಲಿದ್ದು, ಇದಕ್ಕೆ ಚಿತ್ರೋದ್ಯಮದ ಗಣ್ಯಾತೀಗಣ್ಯರು ಸಾಕ್ಷಿಯಾಗಲಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಖಚಿತಪಡಿಸಿದ್ದು, ಕೊನೆಗೂ ಸಂಘದ ಬಹುದಿನದ ಕನಸು ನನಸಾಗುತ್ತಿರುವುದು ಸಂತಸ ಮೂಡಿಸಿದೆ ಎನ್ನುತ್ತಾರೆ.ಸಂಘವೇ ಖರೀದಿಸಿಟ್ಟುಕೊಂಡಿದ್ದ ವಿಶಾಲವಾದ ಜಾಗದಲ್ಲಿ ವಿಶೇಷ ವಿನ್ಯಾಸದ ಸುಸಜ್ಜಿತ ಕಟ್ಟಡ ನಿರ್ಮಾಣದ ಕನಸು ಹೊತ್ತಿರುವ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು, ಅಲ್ಲಿ ಏನೆಲ್ಲ ಇರಬೇಕು ಎನ್ನುವುದರ ನೀಲಿ ನಕ್ಷೆಯನ್ನು ಸಿದ್ದ ಪಡಿಸಿಕೊಂಡಿದೆ. ಮಿನಿ ಚಿತ್ರಮಂದಿರ, ಕನ್ನಡ ಚಿತ್ರರಂಗ ನಡೆದು ಬಂದ ಹಾದಿಗೆ ಸಂಬಂಧಿಸಿದ ಪುಸ್ತಕ ಹಾಗೂ ಡಿವಿಡಿಗಳ ಸಂಗ್ರಹಾಲಯದ ಜತೆಗೆ ಸಿನಿಮಾ ನಿರ್ಮಾಣಕ್ಕೆ ಪೂರಕವಾಗುವ ಇತರೆ ಸೌಲಭ್ಯಗಳು ಅಲ್ಲಿ ಲಭ್ಯ ಇರುವಂತೆ ನೋಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಿದೆಯಂತೆ. ಇನ್ನು ಕನ್ನಡ ಚಿತ್ರರಂಗದ ಇತರೆ ಸಂಘ ಸಂಸ್ಥೆಗಳಿಗೆ ಇರುವಷ್ಟೇ ಇತಿಹಾಸ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘಕ್ಕೂ ಇದೆ.

 

ಇದು ನನ್ನ ಸೌಭಾಗ್ಯ. ನಾನು ಅಧ್ಯಕ್ಷನಾದ ಸಂದರ್ಭದಲ್ಲಿ ಸಂಘದ ಸ್ವಂತ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರುತ್ತಿದೆ, ಹಾಗೆಯೇ ಕಟ್ಟಡ ನಿರ್ಮಾಣ ಆಗುತ್ತಿದೆ ಎನ್ನುವುದು ಖುಷಿ ತಂದಿದೆ. ಹಾಗಂತ ನಾನೊಬ್ಬನೇ ಇದಕ್ಕೆ ಕಾರಣ ಆಲ್ಲ. ಆರಂಭದಿಂಲೂ ಇದಕ್ಕೆ ಹಲವು ಗಣ್ಯರು ಶ್ರಮಿಸಿದ್ದಾರೆ. ನಿರ್ಮಾಪಕ ಮುನಿರತ್ನ ಆವರು ನಿವೇಶನಕ್ಕಾಗಿ ಶ್ರಮಿಸಿದ್ದಾರೆ. ಅವರ ಪಟ್ಟ ಪರಿಶ್ರಮದ ಫಲದಿಂದಾಗಿ ಇವತ್ತು ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಈ ಹೊತ್ತಲ್ಲಿ ಸಂಘಕ್ಕೆ ನಾನು ಅಧ್ಯಕ್ಷ ಅನ್ನೋದು ನನ್ನ ಹೆಮ್ಮೆ. – ಪ್ರವೀಣ್‌ ಕುಮಾರ್‌, ಸಂಘದ ಅಧ್ಯಕ್ಷ

ಸಾಂದಾರ್ಬಿಕ ಚಿತ್ರ

 

ಚಿತ್ರರಂಗದಲ್ಲಿನ ನಿರ್ಮಾಪಕರ ಹಿತ ಕಾಪಾಡುವ ಸಲುವಾಗಿ ೧೯೮೨ ರಲ್ಲಿ ಈ ಸಂಘವು ಆಸ್ತಿತ್ವಕ್ಕೆ ಬಂತು. ನಿರ್ಮಾಪಕಿ ಪಾರ್ವತಮ್ಮ ರಾಜ್‌ ಕುಮಾರ್‌ ನೇತೃತ್ವದಲ್ಲಿ ಅಂದು ಅಸ್ತಿತ್ವಕ್ಕೆ ಬಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಎಚ್.ಎಂ.ಕೆ. ಮೂರ್ತಿ ಮೊದಲ ಅಧ್ಯಕ್ಷರಾದರು. ಆನಂತರ ಬಿ.ಎಂ. ವೆಂಕಟೇಶ್‌, ಶಾಸ್ತ್ರಿ, ಬಸಂತ್‌ ಕುಮಾರ್‌ ಪಾಟೀಲ್‌, ಸಂದೇಶ್‌ ನಾಗರಾಜ್‌ ಅಧ್ಯಕ್ಷರಾದರು. ಆನಂತರ ಸಂಘಕ್ಕೆ ಹಾಲಿ ಶಾಸಕ ಹಾಗೂ ನಿರ್ಮಾಪಕ ಮುನಿರತ್ನ ಅವರು ಆಧ್ಯಕ್ಷರಾದಾಗ ಸಂಘಕ್ಕೆ ಒಂದು ಸ್ವಂತ ಕಟ್ಟಡ ಬೇಕು, ಅದಕ್ಕೆ ಮೊದಲು ನಿವೇಶನ ಬೇಕು ಎನ್ನುವ ಚರ್ಚೆ ನಡೆಯಿತು. ಸಂಘದ ಇತರೆ ಪದಾಧಿಕಾರಿಗಳ ಸಹಕಾರದೊಂದಿಗೆ ಮುನಿರತ್ನ ಅವರೇ ಹೆಚ್ಚು ಆಸಕ್ತಿ ವಹಿಸಿ, ಬೆಂಗಳೂರಿನ ಶಿವಾನಂದ ಸರ್ಕಲ್‌ ಬಳಿಯೇ ಒಂದು ನಿವೇಶನ ಒದಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅಲ್ಲಿಂದೀಗ ನಿರ್ಮಾಪಕ ಪ್ರವೀಣ್‌ ಕುಮಾರ್‌ ಅಧ್ಯಕ್ಷರಾಗಿದ್ದು, ಆವರ ಸೌಭಾಗ್ಯವೇ ಎನ್ನುವಂತೆ ಅವರ ಅವದಿಯಲ್ಲಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ಸಿಗುತ್ತಿದೆ. ಇದಕ್ಕೆ ನಿರ್ಮಾಪಕ ಪ್ರವೀಣ್‌ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಇದೆಲ್ಲ ಸಂಘದ ಪದಾಧಿಕಾರಿಗಳ ಸಹಕಾರವೇ ಕಾರಣ ಎನ್ನುವುದು ಅವರ ಮಾತು.

ವಕೀಲರ ನೋಟಿಸ್‌ ಮೀರಿ ಬರ್ತಾರಾ ಸಿಎಂ?


ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಶುಭ ಸಂದರ್ಭದಲ್ಲಿದ್ದಾರೆ. ಸಂಘಕ್ಕೆ ಸ್ವಂತ ಕಟ್ಟಡ ಬೇಕಿತ್ತು, ಅದೀಗ ಈಡೇರುತ್ತಿದೆ ಎನ್ನುವುದು ಅದಕ್ಕೆ ಕಾರಣ. ಆದು ಸಹಜವೂ ಹೌದು. ಒಂದು ಕಟ್ಟಡ ಬೇಕು ಅಂತ ಸಂಘದ ಪದಾಧಿಕಾರಿಗಳ ಆರಂಭದಿಂದಲೂ ಕಷ್ಟಪಟ್ಟಿದ್ದಾರೆ, ಆದರೆ ಅದಕ್ಕೆ ವಿಘ್ನ ಎನ್ನುವ ಹಾಗೆ ಸಂಘದ ಕಟ್ಟಡ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಭಾಗವಹಿಸುತ್ತಿರುವುದಕ್ಕೆ ವಕೀಲರ ಆಕ್ಷೇಪಣೆ ಇದೆ. ಸಂಘದ ಮೇಲಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳ ಮೂಲಕ ಹೈಕೋರ್ಟ್‌ ವಕೀಲರಾದ ಅಮೃತೇಶ್‌ ಅವರು ಮುಖ್ಯ ಮಂತ್ರಿ ಅವರಿಗೆ ಅಕ್ಷೇಪಣೆ ಪತ್ರ ಕಳುಹಿಸಿದ್ದಾರೆ. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ಹಾಗೂ ಲೆಕ್ಕಪತ್ರ ವ್ಯವಹಾರಗಳಲ್ಲಿ ಲೋಪದೋಷಗಳಿವೆ. ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳ ಮುಂದೆ ಅವೀಗ ವಿಚಾರಣೆ ಹಂತದಲ್ಲಿವೆ.

Related Posts

error: Content is protected !!