ಸೂಪರ್‌ ಹೀರೋ ಕಾನ್ಸೆಪ್ಟ್‌ ಚಿತ್ರ ಮುಕ್ತಾಯ – ಆನ ಇದು ಭಾರತದ ಮೊದಲ ಮಹಿಳಾ ಪ್ರಧಾನ ಸೂಪರ್ ಹೀರೋ ಕಾನ್ಸೆಪ್ಟ್ ಚಿತ್ರ

ವಿಶೇಷ ಪಾತ್ರದಲ್ಲಿ ಅದಿತಿ ಪ್ರಭುದೇವ

ಈಗಾಗಲೇ ಸಾಕಷ್ಟು ಸೂಪರ್ ಹೀರೋ ಕಾನ್ಸೆಪ್ಟ್‌ ಸಿನಿಮಾಗಳು ಬಂದಿವೆ. ಆದರೆ, ಮಹಿಳಾ ಪ್ರಧಾನದ ಸೂಪರ್ ಹೀರೋ ಕಾನ್ಸೆಪ್ಟ್‌ ಚಿತ್ರ ಭಾರತದಲ್ಲಿ ಈವರೆಗೂ ಬಂದಿಲ್ಲ.‌ “ಆನ” ಮೂಲಕ ನಟಿ ಅದಿತಿ ಪ್ರಭುದೇವ ಅವರು ಇಲ್ಲಿ ಮಹಿಳಾ ಸೂಪರ್‌ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಹಿಂದೆ ಅದಿತಿ ಪ್ರಭುದೇವ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ, ಈ ರೀತಿಯ ಪಾತ್ರ ನಿರ್ವಹಿಸಿಲ್ಲ. “ಆನ” ಅವರಿಗೊಂದು ವಿಶೇಷ ಸಿನಿಮಾ ಎನ್ನುವುದಂತೂ ಹೌದು. ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹೆಸರುಫಟ್ಟ ಬಳಿ‌ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಸಲಾಗಿದ್ದು, ಅಲ್ಲೇ‌ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಈಗಷ್ಟೇ ಡಬ್ಬಿಂಗ್‌ ಕೆಲಸ ಕೂಡ ಮುಕ್ತಾಯ ಹಂತದಲ್ಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್‌ ವೇಳೆ ಚಿತ್ರವನ್ನು ಪ್ರೇಕ್ಷಕರ ಎದುರು ತರಲು ತಯಾರಿ ನಡೆಸಲಾಗುತ್ತಿದೆ.


ಈ ಚಿತ್ರಕ್ಕೆ ಮನೋಜ್‌ ಪಿ.ನಡುಲಮನೆ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಹಿಂದೆ ಹಲವು ಕಿರುಚಿತ್ರಗಳು ಹಾಗೂ ಟೆಲಿ ಸಿನಿಮಾ ನಿರ್ದೇಶಿಸಿ ಅನುಭವ ಇರುವ ಮನೋಜ್‌ ಅವರಿಗೆ ಇದು ಮೊದಲ ಸಿನಿಮಾ. ಯು.ಕೆ.ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಪೂಜಾ ವಸಂತಕುಮಾರ್ ಈ
ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣವಿದೆ. ರಿತ್ವಿಕ್ ಮುರಳೀಧರನ್ ಅವರ ಸಂಗೀತ ನಿರ್ದೇಶನವಿದೆ. ವಿಜೇತ್‌ ಚಂದ್ರ ಸಂಕಲನ ಮಾಡುತ್ತಿದ್ದಾರೆ. ಚಿತ್ರದಲ್ಲಿ. ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ಸುನೀಲ್ ಕುಮಾರ್ ಡಿ.ಕೆ, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಂ, ವರುಣ್ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜನ್, ಶಿವಮಂಜು ಸೇರಿದಂತೆ ಇತರರು ಇದ್ದಾರೆ.

Related Posts

error: Content is protected !!