ಏರಿಯಾದಲ್ಲೊಂದ್‌ ಕಲರ್‌ಫುಲ್ ಸ್ಟೋರಿ – ವಾರ್ಡ್‌ ನಂ-11ರಲ್ಲಿ ಎಲ್ಲವೂ ಇದೆ!

ರಾಘಣ್ಣನ ಮತ್ತೊಂದು  ಸಿನ್ಮಾ ಶೂಟಿಂಗ್‌ ಜೋರು

ಕನ್ನಡ ಚಿತ್ರರಂಗದಲ್ಲಿ ದಿನಕಳೆದಂತೆ ಹೊಸಬರ ಕಲರವ ಹೆಚ್ಚುತ್ತಲೇ ಇದೆ. ಈಗ ಹೊಸಬರು ಹೊಸ ಆಸೆ-ಆಕಾಂಕ್ಷೆಗಳೊಂದಿಗೆ ಸಿನಿಮಾರಂಗವನ್ನು ಸ್ಪರ್ಶಿಸುತ್ತಿದ್ದಾರೆ. ಆ ಸಾಲಿಗೆ “ವಾರ್ಡ್‌ ನಂ-11” ಚಿತ್ರತಂಡವೂ ಸೇರಿದೆ. ಹೌದು, ಸಿನಿಮಾರಂಗದಲ್ಲೇ ಹಲವು ವರ್ಷಗಳ ಕಾಲ ಕೆಲಸ ಮಾಡಿ, ಅನುಭವ ಪಡೆದು ಆ ಅನುಭವದ ಆಧಾರದ ಮೇಲೆ ಈಗ “ವಾರ್ಡ್‌ ನಂ-೧೧” ಚಿತ್ರಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಶ್ರೀಕಾಂತ್.‌ ಯಶ್‌ ಅಭಿನಯದ “ಮೊದಸ ಸಲ” ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಶ್ರೀಕಾಂತ್‌, ಆ ನಂತರದ ದಿನಗಳಲ್ಲಿ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

ಜೊತೆ ಜೊತೆಯಲ್ಲಿ ಒಂದಷ್ಟು ಕಿರುಚಿತ್ರಗಳನ್ನೂ ಕೂಡ ನಿರ್ದೇಶಿಸಿದ ಅನುಭವ ಪಡೆದುಕೊಂಡಿದ್ದಾರೆ. ಅದಾದ ಬಳಿಕ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಈಗ “ವಾರ್ಡ್‌ ನಂ-೧೧” ಚಿತ್ರಕ್ಕೆ ಕೈ ಹಾಕಿದ್ದಾರೆ.
ತಮ್ಮ ಚೊಚ್ಚಲ ಚಿತ್ರದ ಕುರಿತು‌ “ಸಿನಿಲಹರಿ” ಜೊತೆ ಮಾತಿಗಿಳಿದ ನಿರ್ದೇಶಕ ಶ್ರೀಕಾಂತ್ ಹೇಳಿದ್ದಿಷ್ಟು.

ಶ್ರೀಕಾಂತ್‌, ನಿರ್ದೇಶಕ

 

“ಇದು ನನ್ನ ಮೊದಲ ಪ್ರಯತ್ನ. ಇಲ್ಲಿ ಪ್ರಯೋಗವೂ ಇದೆ. ಕಮರ್ಷಿಯಲ್‌ ಅಂಶಗಳೂ ಇವೆ. ಇಲ್ಲಿ ರಾಘವೇಂದ್ರ ರಾಜಕುಮಾರ್ ಅವರು ಹೈಲೆಟ್.‌ ಅವರೊಂದಿಗೆ ಸುಮನ್‌ನಗರ್‌ಕರ್‌ ಕೂಡ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ತುಂಬಿದೆ. ಸಿನಿಮಾ ಕುರಿತು ಹೇಳುವುದಾದರೆ, ಇದೊಂದು ಏರಿಯಾದಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿ ಪ್ರೀತಿ ತುಂಬಿದೆ, ದ್ವೇಷವೂ ಇದೆ. ರಾಜಕಾರಣಿಗಳ ಎಂಟ್ರಿಯೂ ಇದೆ.

ಸಂದೀಪ್‌, ನಿರ್ಮಾಪಕರು

ಗೆಳೆತನ ತುಂಬಿದೆ. ಒಟ್ಟಾರೆ, ಇದೊಂದು ಕಮರ್ಷಿಯಲ್‌ ಸಿನಿಮಾ. ಬಹುತೇಕ ಬೆಂಗಳೂರಲ್ಲೇ ಚಿತ್ರೀಕರಣಗೊಂಡಿದೆ. ಶೇ.೭೦ರಷ್ಟು ಚಿತ್ರೀಕರಣಗೊಂಡಿರುವ ಸಿನಿಮಾ ಇನ್ನಷ್ಟು ಭಾಗ ಚಿತ್ರೀಕರಣಗೊಂಡರೆ ಮುಗಿಯಲಿದೆ” ಎಂದು ವಿವರ ಕೊಡುತ್ತಾರೆ.

ರಾಘವೇಂದ್ರ ರಾಜಕುಮಾರ್‌ ಅವರ ನಟನೆ ಬಗ್ಗೆ ಎಷ್ಟು ಹೇಳಿದರೂ ಸಾಲದು. ತುಂಬಾನೇ ಕಂಫರ್ಟಬಲ್‌ ವ್ಯಕ್ತಿ. ಅಂಥವರ ಜೊತೆ ನಾನು ಕೆಲಸ ಮಾಡಿದ್ದೇನೆ ಎನ್ನುವುದೇ ಖುಷಿಯ ವಿಷಯ. ಅವರಿಗಿರುವ ಸಿನಿಮಾ ಪ್ರೀತಿ, ಎನರ್ಜಿ ನೋಡಿ, ನಾವಿನ್ನೂ ಕಲಿಯಬೇಕಾಗಿದ್ದು ಸಾಕಷ್ಟು ಇದೆ ಎನಿಸುತ್ತದೆ. ದೊಡ್ಡ ದೊಡ್ಡ ಕಲಾವಿದರ ಜೊತೆ ನಾನು ಕೆಲಸ ಮಾಡಿದ್ದು ಮರೆಯದ ಅನುಭವ ಅನ್ನುತ್ತಾರೆ ಶ್ರೀಕಾಂತ್.‌

ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರ ಜೊತೆಯಲ್ಲಿ ಸುಮನ್‌ ನಗರ್‌ಕರ್‌ ಮುಖ್ಯವಾಗಿ ಕಾಣಿಸಿಕೊಂಡಿದ್ದಾರೆ. “ದಶರಥ” ಹಾಗೂ “ಕೃಷ್ಣ ತುಳಸಿ” ಸಿನಿಮಾದ ನಾಯಕಿ ಮೇಘಶ್ರೀ ಅವರು ಈ ಚಿತ್ರದ ನಾಯಕಿಯಾಗಿದ್ದಾರೆ. ಉಳಿದಂತೆ ಕಬೀರ್‌ ಸಿಂಗ್, ಅಚ್ಯುತ್‌ಕುಮಾರ್‌, ಸುಧಾಬೆಳವಾಡಿ, ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮಿನಾಡು, ಉಗ್ರಂ ಮಂಜು, “ಕಾಮಿಡಿ ಕಿಲಾಡಿಗಳುʼ ಖ್ಯಾತಿಯ ಗೋವಿಂದೇ ಗೌಡ ಇತರರು ನಟಿಸಿದ್ದಾರೆ. ಚಿತ್ರಕ್ಕೆ ರಾಕೇಶ್‌ ಸಿ.ತಿಲಕ್‌ ಛಾಯಾಗ್ರಹಣವಿದೆ.

“ಕಿನಾರೆ” ಸಿನಿಮಾ ಸಂಗೀತ ನಿರ್ದೇಶಕ ಸುರೇಂದ್ರನಾಥ್‌ ಅವರು ಸಂಗೀತ ನೀಡಿದ್ದಾರೆ. ನಾಲ್ಕು ಹಾಡುಗಳಿದ್ದು, ಅರ್ಮಾನ್‌ ಮಲ್ಲಿಕ್‌, “ವಿಕ್ರಂ ವೇದ” ಗಾಯಕ ಶಿವಂ, ಅನುರಾಧ ಭಟ್‌, ಮೆಹಬೂಬ್‌ ಸಾಬ್‌ ಹಾಡಿದ್ದಾರೆ. ಇನ್ನು, ಚಿತ್ರದಲ್ಲಿ ನಾಲ್ಕು ಭರ್ಜರಿ ಫೈಟ್ಸ್‌ಗಳಿವೆ. ವಿಕ್ರಮ್‌ ಮೋರ್‌, “ಮದಗಜ”, “ಸೂಪರ್‌ ಸ್ಟಾರ್‌” ಹಾಗೂ “ಬಂಪರ್‌” ಸಿನಿಮಾಗಳಿಗೆ ಸಾಹಸ ಸಂಯೋಜಿಸಿರುವ ಅರ್ಜುನ್‌ ಕೂಡ ಸಾಹಸ ನಿರ್ದೇಶನ ಮಾಡಿದ್ದಾರೆ.

ರಾಕೇಶ್‌ ‌, ಸಿ.ತಿಲಕ್‌ ಛಾಯಾಗ್ರಾಹಕ

ಒಂದು ಕಮರ್ಷಿಯಲ್‌ ಚಿತ್ರಕ್ಕೆ ಏನೆಲ್ಲಾ ಇರಬೇಕೋ ಅದೆಲ್ಲವೂ ಇಲ್ಲಿದೆ ಎನ್ನುತ್ತಾರೆ ನಿರ್ದೇಶಕ ಶ್ರೀಕಾಂತ್. ಚಿತ್ರವನ್ನು ಸಂದೀಪ್‌ ಶಿವಮೊಗ್ಗ ನಿರ್ಮಾಣ ಮಾಡಿದ್ದಾರೆ. ಇವರ ಜೊತೆಗೆ ಗುರುರಾಜ ಎ ಮತ್ತು ಹೇಮಂತ್‌ ಕುಮಾರ್‌ ಸಹ ನಿರ್ಮಾಪಕರಾಗಿ ಸಾಥ್‌ ನೀಡಿದ್ದಾರೆ. ಚಿತ್ರಕ್ಕೆ  ಏನೆಲ್ಲಾ ಬೇಕೋ ಎಲ್ಲವನ್ನೂ ಕಲ್ಪಿಸಿಕೊಡುವ ಮೂಲಕ ಒಂದೊಳ್ಳೆಯ ಸಿನಿಮಾ ತಯಾರಾಗಲು ಪ್ರೋತ್ಸಾಹಿಸುತ್ತಿದ್ದಾರೆ. ನನ್ನ ಜೊತೆಗಿರುವ ತಂಡ ಕೂಡ ಒಳ್ಳೆಯ ಸಹಕಾರ ನೀಡಿದೆ. ಹಾಗಾಗಿ ಸಿನಿಮಾ ನಾನು ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಮೂಡಿಬರುತ್ತಿದೆ ಎಂಬುದು ಶ್ರೀಕಾಂತ್‌ ಮಾತು.

ಗಣೇಶ್‌ ಮಲ್ಲಯ್ಯ, ಸಂಕಲನಕಾರ

 

Related Posts

error: Content is protected !!