ಬ್ಯಾಂಗ್ ನಲ್ಲಿ ಗ್ಯಾಂಗ್‌ಸ್ಟರ್‌ ಆದ ನಟಿ

ಕಸ್ತೂರಿ ಮಹಲ್‌ ಬೆನ್ನಲೇ ಮತ್ತೊಂದು ಚಿತ್ರಕ್ಕೆ ನಾಯಕಿ ಆದ ಶಾನ್ವಿ

ನಟಿ ಶಾನ್ವಿ ಶ್ರೀವಾತ್ಸವ್‌ ಬ್ಯುಸಿ ಆಗುತ್ತಿದ್ದಾರೆ. ʼಕಸ್ತೂರಿ ಮಹಲ್‌ʼ ಚಿತ್ರದ ಬೆನ್ನಲೇ ಬ್ಯಾಂಗ್‌ ಹೆಸರಿನ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ವಿಶೇಷ ಅಂದ್ರೆ, ಈ ಚಿತ್ರದಲ್ಲಿ ಅವರು ಗ್ಯಾಂಗ್‌ ಸ್ಟರ್‌ ಪಾತ್ರದಲ್ಲಿ ಕಾಣಸಿಕೊಳ್ಳುತ್ತಿದ್ದಾರೆ. ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.‌ ಈಗಾಗಲೇ ʼಆನೆ ಹಾಗೂ ನಾನುʼ, ʼಅದುʼ ಮತ್ತು ʼಸರೋಜʼ ಚಿತ್ರಗಳನ್ನು ನಿರ್ಮಾಣ ಮಾಡಿರುವ ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ‘ಬ್ಯಾಂಗ್’.

ಹಾಗೆಯೇ ಕಿರುಚಿತ್ರಗಳ ನಿರ್ದೇಶನದ ಮೂಲಕ ಗಮನ ಸೆಳೆದ ಪರುಶುರಾಮ್‌, ಈ ಚಿತ್ರದ ನಿರ್ದೇಶಕ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಿತ್ವಿಕ್ ಮುರಳೀಧರ್ ಸಂಗೀತ ನೀಡುತ್ತಿದ್ದಾರೆ. ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ವಿಶೇಷ ಮತ್ತು ವಿಶಿಷ್ಟ ಅಂದ್ರೆ ಈ ಚಿತ್ರದ ಕತೆ. ಏಳು ಪಾತ್ರ, ಎರಡು ದಿನಗಳಲ್ಲಿ ನಡೆಯುವ ಕಥೆ . ಸದ್ಯಕ್ಕೆ ಈ ಚಿತ್ರಕ್ಕೆ ಶಾನ್ವಿ ಮಾತ್ರ ಫೈನಲ್‌ ಆಗಿದ್ದಾರಂತೆ. ಫೆಬ್ರವರಿ ಮೊದಲವಾರದಿಂದ ಚಿತ್ರೀಕರಣ ಶುರುವಾಗಲಿದೆಯಂತೆ.

Related Posts

error: Content is protected !!