ಅಷ್ಟೊಂದು ಸಂಭಾವನೆ ಸಿಕ್ಕರೆ ನಂಗೂ ಖುಷಿ ಅಲ್ವೇ…?

ಟಾಲಿವುಡ್‌ ನಲ್ಲಿ ರಶ್ಮಿಕಾಗೆ 2 ಕೋಟಿ ಸಂಭಾವನೆಯಂತೆ ಎನ್ನುವ ಪ್ರಶ್ನೆಗೆ ಅಚ್ಚರಿಪಟ್ಟಿದ್ದು ಯಾರು ಗೊತ್ತಾ?

ನ್ಯಾಷನಲ್‌ ಕ್ರಷ್‌ ಅಂತಲೇ ಜನಪ್ರಿಯತೆ ಪಡೆದಿರುವ ಕಿರಿಕ್‌ ಪಾರ್ಟಿ ಚಿತ್ರದ ಖ್ಯಾತಿಯ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಬಹುಭಾಷೆಗಳಲ್ಲಿ ಬಹು ಬೇಡಿಕೆಯ ನಟಿ. ವಿಶೇಷವಾಗಿ ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮನೆ ಮಾತಾದ ಜನಪ್ರಿಯ ತಾರೆ. ಈಗ ಅಲ್ಲಿ ಅವರು ಒಂದು ಸಿನಿಮಾಕ್ಕೆ ಪಡೆಯುವ ಸಂಭಾವನೆ ಎಷ್ಟು? ಒಂದು ಸಿನಿಮಾಕ್ಕೆ ಅಲ್ಲಿ ಅವರು ಪಡೆಯುತ್ತಿರುವ ಸಂಭಾವನೆ ಎರಡು ಕೋಟಿ ಎನ್ನುವುದು ನಿಜವೇ?

ಅಧಿಕೃತವಾಗಿ ಅದು ಯಾರಿಗೂ ಗೊತ್ತಿಲ್ಲ. ಆದರೆ ಸೋಷಲ್‌ ಮೀಡಿಯಾದಲ್ಲಿ ಅವರ ಸಂಭಾವನೆ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಪ್ರಕಾರ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್‌ ನಲ್ಲಿ ಒಂದು ಸಿನಿಮಾಕ್ಕೆ ಪಡೆಯುವ ಸಂಭಾವನೆ ೨ ಕೋಟಿ. ಹಾಗಾದ್ರೆ ಇದು ನಿಜವೇ? ಇದಕ್ಕೆ ಖುದ್ದು ನಟಿ ರಶ್ಮಿಕಾ ಮಂದಣ್ಣ ಅವರು ಹೇಳುವುದೇನು?

ಶನಿವಾರ ʼಪೊಗರುʼ ಚಿತ್ರದ ಮೀಟ್‌ ದಿ ಮೀಡಿಯಾ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಅವರಿಗೆ ಈ ಪ್ರಶ್ನೆ ಎದುರಾಯಿತು. ಟಾಲಿವುಡ್‌ ನಲ್ಲಿ ನೀವು ಒಂದು ಸಿನಿಮಾಕ್ಕೆ ಪಡೆಯುತ್ತಿರುವ ಸಂಭಾವನೆ ಎಷ್ಟು? ಎರಡು ಕೋಟಿ ಇದೆ ಎನ್ನುವುದು ನಿಜವೇ ? ಎನ್ನುವ ಪ್ರಶ್ನೆಗಳಿಗೆ ಉತ್ತರಿಸುವ ಮುನ್ನ ನಟಿ ರಶ್ಮಿಕಾ ಮಂದಣ್ಣ ಜೋರಾಗಿ ನಕ್ಕರು.


“ಅಯ್ಯೋ,, ಅಷ್ಟೊಂದು ಸಂಭಾವನೆ ಸಿಕ್ಕರೆ ನಂಗೂ ಖುಷಿ ಅಲ್ವೇ? ಹಾಗೆಲ್ಲ ಹೇಳಿದರು, ಹೇಳುತ್ತಿರುವವರು ಯಾರೋ ನಂಗೆ ಗೊತ್ತಿಲ್ಲ. ಆದ್ರೆ ನನ್ನ ಪ್ರಕಾರ ಅದೆಲ್ಲ ಸುಳ್ಳು. ವಾಸ್ತವದಲ್ಲಿ ಅಷ್ಟೊಂದು ಸಂಭಾವನೆ ಪಡೆಯುತ್ತಿರುವ ನಟಿ ನಾನಲ್ಲ. ಒಂದು ವೇಳೆ ಅಷ್ಟು ಸಂಭಾವನೆ ಸಿಕ್ಕಿದ್ದರೆ ನಿಜಕ್ಕೂ ಅದು ನಂಗೂ ಖುಷಿ ನೀಡುತ್ತಿತ್ತು.

ಆದರೆ ಅದೆಲ್ಲ ಅಪಪ್ರಚಾರ ಮಾತ್ರ. ಅದರಿಂದಲೇ ಅಲ್ವೇ, ನಮ್ಮ ಮನೆ ಮೇಲೆ ಐಟಿ ದಾಳಿ ನಡೆದಿದ್ದು. ಇದೆಲ್ಲದ್ದಕ್ಕೂ ನಾನು ಹೇಗೆ ಪ್ರತಿಕ್ರಿಯಿಸಬೇಕೋ ಗೊತ್ತಿಲ್ಲ. ಆದರೆ ಅಷ್ಟೊಂದು ಸಂಭಾವನೆ ಬೇಕೆಂದು ಅಲ್ಲಿ ನಾವೇ ಡಿಮ್ಯಾಂಡ್‌ ಮಾಡಿದರೂ ಅಲ್ಲಿ ಕೊಡುವವರು ಇಲ್ಲ. ಅವರಿಗೂ ಗೊತ್ತು, ಯಾರಿಗೆ ಎಷ್ಟೇಲ್ಲ ಡಿಮ್ಯಾಂಡ್‌ ಇದೆ, ಎಷ್ಟು ಕೊಡಬೇಕು ಅಂತ. ನಾವು ಕೇಳಿದಷ್ಟನ್ನೇ ಕೊಡುವುದಕ್ಕೂ ಕೂಡ ಬೇರೆ, ಬೇರೆ ನಟಿಯರನ್ನು ಮಾದರಿಯಾಗಿ ತೋರಿಸುತ್ತಾರೆ. ಅವರೇ ಅಷ್ಟೊಂದು ಕಡಿಮೆ ಸಂಭಾವನೆ ಪಡೆಯುವಾಗ, ನೀವ್ಯಾಕೆ ಇಷ್ಟೊಂದು ಕೇಳ್ತೀರಾ ಅಂತಾರೆʼ ಎನ್ನುವ ಮಾತುಗಳ ಮೂಲಕ ಸಂಭಾವನೆ ಹಿಂದಿನ ಗುಟ್ಟು ರಟ್ಟು ಮಾಡಲು ನಿರಾಕರಿಸಿದರು.

Related Posts

error: Content is protected !!