ರಾಬರ್ಟ್‌ಗೆ ಸೆನ್ಸಾರ್‌ ಅಸ್ತು! ಯು/ಎ ಪ್ರಮಾಣ ಪತ್ರದಲ್ಲಿ ಪ್ರೇಕ್ಷಕರ ದರ್ಶನ

ಸದ್ಯಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ಇಂಡಸ್ಟ್ರಿಯಲ್ಲೂ ಭಾರೀ ಕುತೂಹಲ ಕೆರಳಿಸಿರುವ ದರ್ಶನ್‌ ಅಭಿನಯದ “ರಾಬರ್ಟ್‌” ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಅಸ್ತು ಎಂದಿದೆ. ಹೌದು, ಚಿತ್ರಕ್ಕೆ “ಯು/ಎ” ಪ್ರಮಾಣ ಪತ್ರ ನೀಡಿದೆ. ಮಾರ್ಚ್‌ ೧೧ ರಂದು ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೇಲರ್‌ ಮತ್ತು ಹಾಡುಗಳು ಭರ್ಜರಿ ಸದ್ದು ಮಾಡಿದ್ದಲ್ಲದೆ, ನಿರೀಕ್ಷೆ ಹೆಚ್ಚಿಸಿದೆ. ಸದ್ಯ ಚಿತ್ರತಂಡ ಸಿನಿಮಾ ಪ್ರಚಾರದಲ್ಲಿ ನಿರತವಾಗಿದೆ.

ಇತ್ತೀಚಿಗಷ್ಟೆ ಹೈದರಾಬಾದ್ ಮತ್ತು ಹುಬ್ಬಳ್ಳಿಯಲ್ಲಿ “ರಾಬರ್ಟ್‌” ಚಿತ್ರತಂಡ ಅದ್ಧೂರಿಯಾಗಿ ಪ್ರೀರಿಲೀಸ್‌ ಈವೆಂಟ್‌ ನಡೆದಿದೆ. ಸದ್ಯ ಚಿತ್ರಕ್ಕೆ ಯುಎ ಪ್ರಮಾಣ ಪತ್ರ ಸಿಕ್ಕಿದೆ. ಇದೇ ಸಂಭ್ರಮದಲ್ಲಿರುವ ಚಿತ್ರತಂಡ ಚಿತ್ರದ 3 ನಿಮಿಷದ ಪ್ರೋಮೋವನ್ನು ರಿಲೀಸ್ ಮಾಡಿದೆ. “ರಾಬರ್ಟ್” ಚಿತ್ರದ ಹಾಡು ಹಾಗೂ ಟ್ರೇಲರ್‌ಗೆ ಕನ್ನಡ ಮತ್ತು ತೆಲುಗಿನಲ್ಲಿ ದೊಡ್ಡ ಮಟ್ಟದ ಮೆಚ್ಚುಗೆಯೇ ಸಿಕ್ಕಿದೆ.

ಚಿತ್ರದಲ್ಲಿ ದರ್ಶನ್‌ ಅವರಿಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಆಶಾ ಭಟ್ ಅವರಿಗೆ ಇದು ಮೊದಲ ಕನ್ನಡ ಸಿನಿಮಾ. ಚಿತ್ರದ ಮತ್ತೊಂದು ವಿಶೇಷವೆಂದರೆ, ವಿನೋದ್ ಪ್ರಭಾಕರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಲನ್ ಆಗಿ ಖ್ಯಾತ ನಟ ಜಗಪತಿ ಬಾಬು ಅಬ್ಬರಿಸಿದ್ದಾರೆ. ದೇವರಾಜ್, ರವಿಶಂಕರ್ ಸೇರಿದಂತೆ ದೊಡ್ಡ ಕಲಾವಿದರು ಇಲ್ಲಿದ್ದಾರೆ.

Related Posts

error: Content is protected !!