ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದರೆ, ಪ್ರತಿ ವರ್ಷದಂತೆ ಈ ಬಾರಿ ಅವರು ತಮ್ಮ ಹುಟ್ಟು ಹಬ್ಬವನ್ನು ಗ್ರಾಂಡ್ ಆಗಿ ಆಚರಿಸಿಕೊಂಡಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಗ್ರಾಂಡ್ ಬರ್ತ್ ಡೇ ಆಚರಣೆಗೆ ಬ್ರೇಕ್ ಹಾಕಿ, ಕುಟುಂಬದವರ ಜತೆಗೆ ಮಾತ್ರ ಸರಳವಾಗಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಬರ್ತ್ ಡೇ ಮುನ್ನ ದಿನವೇ ಅವರು ಫೇಸ್ ಬುಕ್ ಮೂಲಕ ಲೈವ್ ಬಂದು, ಈ ಬಾರಿ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ, ಅಭಿಮಾನಿಗಳು ಯಾರು ಕೂಡ ಮನೆ ಹತ್ತಿರ ಬರಬಾರದು ಅಂತ ಮನವಿ ಮಾಡಿಕೊಂಡಿದ್ದರು. ಅಂತೆಯೇ ಈ ಬಾರಿ ಅವರು ಯಾವುದೇ ಆಡಂಬರ ಇಲ್ಲದೆ ಸರಳವಾಗಿಯೇ ಹುಟ್ಟು ಆಚರಿಸಿಕೊಂಡರೂ, ಸೋಷಲ್ ಮೀಡಿಯಾ ಮೂಲಕ ಅವರ ಹುಟ್ಟು ಹಬ್ಬಕ್ಕೆ ಶುಭಾಶಯದ ಮಹಾಪೂರವೇ ಹರಿದು ಬಂದಿದೆ. ವಿಶೇಷವಾಗಿ ನಟರಾದ ದರ್ಶನ್, ಸುದೀಪ್ ಸೇರಿದಂತೆ ಕನ್ನಡದ ಹಲವು ನಟರು ಟ್ವಿಟರ್ ಸೇರಿದಂತೆ ಸೋಷಲ್ ಮೀಡಿಯಾದಲ್ಲಿ ಅಪ್ಪುಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಹಾಗೆಯೇ ಅಭಿಮಾನಿಗಳು ಕೂಡ ಅಪ್ಪುಗೆ ಹುಟ್ಟು ಹಬ್ಬದ ಶುಭಾಶಯದ ಮಹಾಪೂರವೇ ಹರಿದು ಬಂದಿದ್ದು ವಿಶೇಷ.