ಕನ್ನಡ ಚಿತ್ರರಂಗಕ್ಕೆ ಈಗ ಮತ್ತೆ ಕೊರೊನಾ ಬಿಸಿ ತಟ್ಟುತ್ತಿದೆ. ಕೊರೊನೊ ಎರಡನೇ ಅಲೆ ಜೋರಾಗುತ್ತಿರುವಂತೆಯೇ ಕೊರೊನೊ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತಂತೆ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಹೀಗಾಗಿ ಟಫ್ ರೂಲ್ಸ್ ಜಾರಿ ಮಾಡಿದೆ. ಇದರಿಂದಾಗಿ ಕನ್ನಡಚಿತ್ರರಂಗಕ್ಕೂ ಸಮಸ್ಯೆ ಎದುರಾಗಿದೆ. ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಕೊಡಲಾಗಿದೆ. ಈ ನಿರ್ಬಂಧ ದಿಂದ ಇಡೀ ಚಿತ್ರೋದ್ಯಮವೇ ದಂಗಾಗಿದೆ. ಹಲವು ನಟರು, ನಿರ್ಮಾಪಕ, ನಿರ್ದೇಶಕರು ಕೂಡ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪಿಸಿದ್ದಾರೆ.
ಈಗಷ್ಟೇ ಕೊರೊನೊ ಸಮಸ್ಯೆ ತಿಳಿಯಾಗಿ ಮೆಲ್ಲನೆ ಚೇತರಿಸಿಕೊಳ್ಳುತ್ತಿರುವಂತೆಯೇ, ಈಗ ಟಫ್ ರೂಲ್ಸ್ ಜಾರಿಯಾಗಿದೆ. ಇದರಿಂದ ಪುನಃ ಸಿನಿರಂಗಕ್ಕೆ ದೊಡ್ಡ ಹೊಡೆತವೇ ಆಗಿದೆ ಎಂದು ಚಿತ್ರರಂಗದ ಹಲವರು ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿದ್ದಾರೆ. ಅತ್ತ ನಟ ಪುನೀತ್ ರಾಜಕಾರ್ ಅವರು ಸಹ ಫೇಸ್ ಬುಕ್ ಲೈವ್ ಮಾಡುವ ಮೂಲಕ
ಮನವಿ ಮಾಡಿದ್ದು, ಶೇ.50ರಷ್ಟು ಭರ್ತಿಗೆ ಆದೇಶ ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತಾಡುವುದಾಗಿಯೂ ಹೇಳಿದ್ದಾರೆ. ಇದು ನಮಗೆ ದೊಡ್ಡ ಸಮಸ್ಯೆ ಆಗುತ್ತೆ. ಈ ನಿಯಮ ಕೈ ಬಿಡಿ. ಜನರು ಮುಂಜಾಗ್ರತೆ ವಹಿಸಿ ಸಿನಿಮಾ ನೋಡುತ್ತಿದ್ದಾರೆ. ದಯವಿಟ್ಟು ಈ ನಿಯಮ ಹಿಂಪಡೆಯಿರಿ ಎಂದು ಮನವಿ ಮಾಡಿದ್ದಾರೆ.
ಏಪ್ರಿಲ್ 1ರಂದು “ಯುವರತ್ನ” ಬಿಡುಗಡೆಯಾಗಿದೆ. ಮೊದಲ ದಿನ ಭರ್ಜರಿ ಗಳಿಕೆ ದಾಖಲೆ ಮಾಡಿದ ಚಿತ್ರಕ್ಕೆ ಈಗ ಶೇ.50 ರಷ್ಟು ನಿಯಮ ಎಷ್ಟು ಸರಿ ಎಂಬುದು ಎಲ್ಲರ ಪ್ರಶ್ನೆ.
ಇದೇ ನಿಯಮ ಮುಂದುವರೆದ್ದಲ್ಲಿ ಖಂಡಿತವಾಗಿಯೂ ಸಿನಿಮಾರಂಗ ಮತಗತೆ ಮೇಲೇಳಲು ಪರದಾಡಬೇಕಾಗುತ್ತೆ.
ಅದೇನೆ ಇರಲಿ, ಕೊರೊನೊ ಅಲೆ ಮತ್ತೆ ಶುರುವಾಗದಿರಲಿ, ಎಲ್ಲವೂ ಈಗ ನಡೆದಂತೆ ನಡೆಯಲಿ ಎಂಬುದೇ ಆಶಯ.