ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದೇನೆ, ಈ ವಾರ ಬಿಗ್‌ ಬಾಸ್‌ ಮಿಸ್‌ ಮಾಡಿಕೊಳ್ಳುತ್ತಿದ್ದೇನೆ – ಕಿಚ್ಚ ಸುದೀಪ್ ‌

ನಟ, ನಿರ್ದೇಶಕ ಕಿಚ್ಚ ಸುದೀಪ್‌, ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸುದೀಪ್‌ ಅವರ ಅರೋಗ್ಯದಲ್ಲಿ ವ್ಯತ್ಯಾಸ ಆಗಿದೆ ಎಂಬುದಾಗಿ ಹರಡಿರುವ ಸುದ್ದಿಗಳಿಗೆ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಆರೋಗ್ಯದ ಕುರಿತು ಸ್ವತಃ ಸುದೀಪ್ ಅವರೇ ಆರೋಗ್ಯ ಕುರಿತು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಹಾಗೆಯೇ ಈ ವಾರ ಬಿಗ್‌ ಬಾಸ್‌ ಮಿಸ್‌ ಮಾಡಿಕೊಳ್ಳುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.ಸದ್ಯಕ್ಕೆ ತಮಗೆ ಏನಾಗಿದೆ ಎನ್ನುವುದರ ಕುರಿತು ನಿಖರವಾಗಿ ಏನನ್ನು ತಿಳಿಸಿಲ್ಲ. ಹಾಗೆಯೇ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ ಒಂದಷ್ಟು ಅನಾರೋಗ್ಯದಲ್ಲಿದ್ದೇನೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.

”ಅನಾರೋಗ್ಯದಿಂದ ಬಳಲುತ್ತಿದ್ದರು ವಾರಾಂತ್ಯದೊಳಗೆ ಚೇತರಿಸಿಕೊಳ್ಳುವ ನಂಬಿಕೆ ಇದೆ. ಆದರೆ, ವೈದ್ಯರ ಸಲಹೆಯ ಮೇರೆಗೆ ನಾನು ಸ್ವಲ್ಪ ಹೆಚ್ಚು ವಿಶ್ರಾಂತಿ ಪಡೆಯಬೇಕಿದೆ” ಎಂದು ಟ್ವೀಟ್ ಮಾಡಿದ್ದಾರೆ. ಸದ್ಯಕ್ಕೆ ನಟ ಕಿಚ್ಚ ಸುದೀಪ್‌ ಕಲರ್ಸ್‌ ಕನ್ನಡದ ಬಿಗ್‌ ಬಾಸ್‌ ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಹಾಗೆಯೇ ಈಗಷ್ಟೇ ಅವರು ವಿಕ್ರಾಂತ್‌ ರೋಣ ಹಾಗೂ ಕೋಟಿಗೊಬ್ಬ 3 ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇವೆರೆಡು ಚಿತ್ರಗಳು ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿವೆ. ವಿಕ್ರಾಂತ ರೋಣ ಚಿತ್ರ ತಂಡ ಅದರ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಆಗಸ್ಟ್‌19 ಕ್ಕೆ ವಿಕ್ರಾಂತ್‌ ರೋಣ ತೆರೆಗೆ ಬರುತ್ತಿದೆ. ಮತ್ತೊಂದೆಡೆ ಕೋಟಿಗೊಬ್ಬ 3 ಚಿತ್ರದ ತಂಡ ಯುಗಾದಿ ಹಬ್ಬಕ್ಕೆ ಸ್ಪಷಲ್‌ ಪೋಸ್ಟರ್‌ ಲಾಂಚ್‌ ಮಾಡಿದೆ. ಉಳಿದಂತೆ ಈಗ ಬಿಗ್‌ ಬಾಸ್‌ ನಿರೂಪಣೆಗೆ ಸುದೀಪ್‌ ಅನಾರೋಗ್ಯದ ನಡುವೆಯೂ ಹಾಜರಾಗುತ್ತಾರಾ ಅನ್ನೋದು ಕುತೂಹಲ ಹುಟ್ಟಿಸಿದೆ. ಸದ್ಯಕ್ಕೆ ಈ ವಾರ ಅವರ ಜಾಗಕ್ಕೆ ಬೇರೊಬ್ಬರು ಬರುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿಬಂದಿವೆ.ಈ ಮಧ್ಯೆ ಕಿಚ್ಚ ಸುದೀಪ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಲಿ ಅಂತ ಸೋಷಲ್‌ ಮೀಡಿಯಾದಲ್ಲಿ ಶುಭ ಹಾರೈಸಿದ್ದಾರೆ.

Related Posts

error: Content is protected !!