ರಶ್ಮಿಕಾ ಮಂದಣ್ಣ ಅದೃಷ್ಟವಂತೆ…!
ಹೌದು, ಈ ಮಾತು ಅಕ್ಷರಶಃ ನಿಜ. ಮೊದಲ ಸಿನಿಮಾದಲ್ಲೇ ಗೆಲುವು ಕಂಡ ಬೆಡಗಿ. ಅಷ್ಟೇ ಅಲ್ಲ, ತನ್ನ ಅಂದದ ಮೊಗದಿಂದಲೇ ಎಲ್ಲರನ್ನೂ ಮೋಡಿ ಮಾಡಿದವೃು. ನೋಡ ನೋಡುತ್ತಿದ್ದಂತೆಯೇ ಕನ್ನಡ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಬಾಲಿವುಡ್‌ಗೂ ಕಾಲಿಟ್ಟ ಚೆಲುವೆ ಈಕೆ. ನ್ಯಾಷನಲ್ ಕ್ರಶ್ ಎನಿಸಿಕೊಂಡಿರುವ ರಶ್ಮಿಕಾ, ಒಂದು ಸುತ್ತು ಎಲ್ಲಾ ಸ್ಟಾರ್‌ಗಳ ಜೊತೆ ಡಿಂಗುಡಾಂಗು ಅಂತ ಕುಣಿದು ಕುಪ್ಪಳಿಸಿದ್ದಾರೆ. ಇತ್ತೀಚೆಗಷ್ಟೇ ಬಾಲಿವುಡ್‌ಗೆ ಹಾರಿದ್ದ ರಶ್ಮಿಕಾಗೆ ಈಗ ಮತ್ತೊಂದು ಭರ್ಜರಿ ಅವಕಾಶವೊಂದು ಸಿಕ್ಕಿದೆ. ಹಾಗಂತ, ಅದು ಹೊಸ ಬಾಲಿವುಡ್ ಸಿನಿಮಾನಾ ಅಂತಂದುಕೊಳ್ಳುವಂತಿಲ್ಲ. ಅವರೀಗ ಜನಪ್ರಿಯ ಕಂಪೆನಿಯೊಂದಕ್ಕೆ ರಾಯಭಾರಿಯಾಗಿದ್ದಾರೆ ಎಂಬುದು ಈ ಹೊತ್ತಿನ ಸುದ್ದಿ.
ಈಗಾಗಲೇ ಅನೇಕ ಸ್ಟಾರ್ ನಟಿಯರು ಹಲವು ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿರುವುದು ಗೊತ್ತೇ ಇದೆ. ರಶ್ಮಿಕಾ ಕೂಡ ಈಗ ದೊಡ್ಡ ಕಂಪೆನಿಗೆ ರಾಯಭಾರಿಯಾಗಿದ್ದಾರೆ. ಫಾಸ್ಟ್ ಫುಡ್ ತಯಾರಿಕಾ ಕಂಪೆನಿಯೊಂದು ರಶ್ಮಿಕಾ ಮಂದಣ್ಣ ಅವರನ್ನು ಸೌತ್ ಇಂಡಿಯಾ ರಾಯಭಾರಿಯನ್ನಾಗಿ ನೇಮಕ ಮಾಡಿದೆ.
ಅಂದಹಾಗೆ, ಅದು ಮೆಕ್‌ಡೊನಾಲ್ಡ್ ಬ್ರ್ಯಾಂಡ್. ಸದ್ಯಕ್ಕೆ ರಶ್ಮಿಕಾ ಮೆಕ್‌ಡೊನಾಲ್ಡ್ ಬ್ರ್ಯಾಂಡ್‌ನ ಸೌತ್ ಇಂಡಿಯಾ ರಾಯಭಾರಿ. ಅದೇನೆ ಇರಲಿ, ಒಂದರ ಮೇಲೊಂದು ಅದೃಷ್ಟ ರಶ್ಮಿಕಾ ಅವರನ್ನು ಹುಡುಕಿ ಬರುತ್ತಿದೆ. ಮುಂದಿನ ದಿನಗಳಲ್ಲಿ ರಶ್ಮಿಕಾಗೆ ಇನ್ನಷ್ಟು ಬ್ರ್ಯಾಂಡ್ ಸಿಕ್ಕರೆ ಅಚ್ಚರಿಯೇನಿಲ್ಲ.