ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ (59) ಶನಿವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದಾಗಿ
ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಅವರಿಗೆ ಶುಕ್ರವಾರವಷ್ಟೇ ಹೃದಯಘಾತವಾಗಿತ್ತು. ಹೀಗಾಗಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿವೇಕ್ ಅವರು ಗುರುವಾರ ಕೋವಿಡ್ ಲಸಿಕೆ ಪಡೆದಿದ್ದರು. ಆ ಬಳಿಕ ಅವರು ಆ ಕುರಿತು ಜಾಗೃತಿ ಮೂಡಿಸಿದ್ದರು. ಅವರು ಲಸಿಕೆ ಪಡೆದುಕೊಂಡಿದ್ದಕ್ಕೂ ಹೃದಯಸ್ತಂಭನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಲಾಗಿದೆ.
ಪದ್ಮಶ್ರೀ ಪುರಸ್ಕೃತ ವಿವೇಕ್ ಅವರು ರಜನಿಕಾಂತ್, ವಿಜಯ್, ಅಜಿತ್ ಕುಮಾರ್ ಸೇರಿದಂತೆ ಅನೇಕ ಖ್ಯಾತ ನಾಯಕರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.