ಕೊರೊನಾಗೆ ಬಲಿಯಾದ ಬಾಲಿವುಡ್‌ ಸಂಗೀತ ನಿರ್ದೇಶಕ ಶ್ರವಣ್‌ ರಾಥೋಡ್

‌ಕೊರೊನಾ ಆರ್ಭಟಕ್ಕೆ ಈಗಾಗಲೇ ಅದೆಷ್ಟೋ ಜೀವಗಳು ಪ್ರಾಣಬಿಟ್ಟಿವೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ್ದವರ ಬದುಕು ಕೂಡ ಬೀದಿಗೆ ಬಂದು ನಿಂತಿದೆ. ಅದರಲ್ಲೂ ಚಿತ್ರರಂಗದವರ ಪಾಲಿಗೆ ಕೊರೊನಾ ಹೆಮ್ಮಾರಿ ದೊಡ್ಡ ಆಘಾತ ತಂದೊಡ್ಡಿದೆ. ಈಗಾಗಲೇ ಚಿತ್ರರಂಗದ ಅನೇಕರು ಜೀವ ಬಿಟ್ಟಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ನದೀಮ್‌ ಶ್ರವಣ್‌ ರಾಥೋಡ್‌ (೬೬) ಅವರು ಕೊರೊನಾದಿಂದಾಗಿ ನಿಧನರಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿತ್ತು. ಹೀಗಾಗಿ ಅವರನ್ನು ಮುಂಬೈನ ಎಸ್‌.ಎಲ್‌. ರಹೇಜಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರ ಸ್ಥಿತಿ ತೀರ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರವಣ್ ನಿಧನದ ವಿಷಯವನ್ನು ನಿರ್ದೇಶಕ ಅನಿಲ್ ಶರ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶ್ರವಣ್ ಸಾವಿಗೆ ಸಂತಾಪ ಸೂಚಿಸಿರುವ ಅನಿಲ್ ಶರ್ಮಾ, “ತುಂಬಾ ದುಃಖಕರ ವಿಚಾರವಿದು” ಎಂದಿದ್ದಾರೆ.


ಶ್ರವಣ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಖ್ಯಾತ ಗಾಯಕಿ ಶ್ರೇಯಾ ಘೋಷಲ್ ಟ್ವೀಟ್ ಮೂಲಕ, “ಶ್ರವಣ್ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅಪ್ಪಟ ವಿನಮ್ರ ಮನುಷ್ಯ. ಸಂಗೀತ ಲೋಕದಲ್ಲಿ ಅತೀ ದೊಡ್ಡ ಸಂಯೋಜಕರಲ್ಲಿ ಒಬ್ಬರಾಗಿದ್ದರು” ಎಂದಿದ್ದಾರೆ. ಶ್ರವಣ್ ರಾಥೋಡ್ 90ರ ದಶಕದಲ್ಲಿ ಬಿಜಿ ಸಂಗೀತ ನಿರ್ದೇಶಕರಾಗಿದ್ದರು. “ಆಶಿಕಿ”, “ಸಾಜನ್”, “ಹಮ್ ಹೈ ರಹಿ ಪ್ಯಾರ್ ಕಿ”, “ಪರ್ದೇಸ್”, “ರಾಜಾ ಹಿಂದುಸ್ತಾನಿ” ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

Related Posts

error: Content is protected !!