ಕನ್ನಡದಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ನಿಧನರಾಗಿದ್ದಾರೆ. ಕಳೆದ 23 ದಿನಗಳ ಹಿಂದೆಯೇ ಅವರಿಗೆ ಕೋವಿಡ್ ಪಾಸಿಟಿವ್ ಇತ್ತು. ಮಣಿಪಾಲ್ ಗೆ ದಾಖಲಿಸಲಾಗಿತ್ತು. ಕೊರೊನಾದಿಂದ ಹೊರ ಬಂದಿದ್ದರೂ, ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡು ಗುರುವಾರ ಮುಂಜಾನೆ ನಿಧನರಾಗಿದ್ದಾರೆ.
ನಿಮಿಶಾಂಬ ಪ್ರೊಡಕ್ಷನ್ಸ್ ಮೂಲಕ “ಅಣ್ಣಯ್ಯ”, “ಬಿಂದಾಸ್”, “ಏನೋ ಒಂಥರಾ”, “ರನ್ನ” ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು.
ಚಂದ್ರಶೇಖರ್ ಅವರು ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರಿಗಾಗಿ ಸಿನಿಮಾವೊಂದನ್ನು ಮಾಡುವುದಾಗಿ ಅನೌನ್ಸ್ ಮಾಡಿದ್ದರು.
ಕೋಟಿ ನಿರ್ಮಾಪಕ ರಾಮು ಅವರ ಜೊತೆಗೆ ಉದ್ಯಮ ಮತ್ತೊಂದು ಅನ್ನದಾತನ್ನ ಕಳೆದುಕೊಂಡಂತಾಗಿದೆ.