ಕೊರೊನಾ ಸೋಂಕಿತರ ಸೇವೆಯಲ್ಲಿರೋ ಐದು ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ ನಟ ಶ್ರೀಮುರಳಿ

ಕೊರೊನಾ ಸಂಕಷ್ಟದ ಸಮಯದಲ್ಲಿ ಹಗಲಿರುಳು ಕೊರೊನಾ ಸೋಂಕಿತರ ಸೇವೆ ಮಾಡುತ್ತಿರುವ ಬೆಂಗಳೂರಿನ 5 ಸರಕಾರಿ ಆಸ್ಪತ್ರೆಯ ಡಾಕ್ಟರ್ಸ್, ನರ್ಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು
ಊಟದ ವ್ಯವಸ್ಥೆ ಮಾಡಿದ್ದಾರೆ.


ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ, ರಾಜಾಜಿನಗರದ ಇಎಸ್ಐ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಜಯನಗರದ ಜನರಲ್ ಆಸ್ಪತ್ರೆ ಮತ್ತು ಸಿವಿ ರಾಮನ್ ಜನರಲ್ ಆಸ್ಪತ್ರೆ ಸಿಬ್ಬಂದಿಗೆ


ಊಟದ ವ್ಯವಸ್ಥೆ ಮಾಡುವ ಮೂಲಕ ಕೊರೊನಾ ವಾರಿಯರ್ಸ್ ಗೆ ಧನ್ಯವಾದ ಅರ್ಪಿಸಿದ್ದಾರೆ.

Related Posts

error: Content is protected !!