ಸಿನಿಮಾ ಕಾರ್ಮಿಕರಿಗೆ ಕೋವಿಡ್‌ ಕೇಂದ್ರ ಆರಂಭಿಸಿ- ಸರ್ಕಾರಕ್ಕೆ ನಿರ್ಮಾಪಕ ಭಾ.ಮ. ಹರೀಶ್‌ ಮನವಿ


ಕೊೊರೊನಾ ಎರಡನೇ ಅಲೆಯ ಭೀಕರತೆ ಚಿತ್ರೋದ್ಯವನ್ನು ಕಂಗಾಲಾಗಿಸಿದೆ. ಸಿನಿಮಾ ಚಟುವಟಿಕೆಗಳ ಕತೆ ಇರಲಿ, ಉದ್ಯಮದ ಜನ ಜೀವ ಉಳಿಸಿಕೊಳಸಳುವುದಕ್ಕಾಗಿಯೇ ಈಗ ಹೋರಾಡಬೇಕಿದೆ. ಅಪಾರ ಸಾವು-ನೋವುಗಳು ಸಿನಿಮಾ ಮಂದಿಯನ್ನು ತೀವ್ರ ಆತಂಕಕ್ಕೆ ದೂಡಿದೆ. ಆಸ್ಪತ್ರೆಗಳಲ್ಲಿ ಸಕಾಲಕ್ಕೆ ವೈದ್ಯಕೀಯ ಸೌಲಭ್ಯ ಸಿಗದ ಹಿನ್ನೆಲೆಯಲ್ಲಿ , ಈಗ ಸಿನಿಮಾ ಮಂದಿ ಸಿನಿಮಾ ಕಾರ್ಮಿಕರಿಗಾಗಿಯೇ ಸರ್ಕಾರ ಪ್ರತ್ಯೇಕ ಕೋವಿಡ್‌ ಕೇರ್‌ ಸೆಂಟರ್‌ ಗಳನ್ನು ಆರಂಭಿಸುವಂತೆ ಸರ್ಕಾರದ ಮುಂದೆ ಬೇಡಿಕೆ ಇಡುತ್ತಿದ್ದಾರೆ.


ಈ ನಿಟ್ಟಿನಲ್ಲೀಗ ನಿರ್ಮಾಪಕ ಭಾ.ಮ. ಹರೀಶ್‌ ಕೂಡ ಸರ್ಕಾರಕ್ಕೆ ಮನವಿ ಪತ್ರ ಬರೆದಿದ್ದು, ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡ, ಬಿಗ್‌ಬಾಸ್‌ ಮನೆ ಹಾಗೂ ಕಂಠೀರವ ಸ್ಟುಡಿಯೋ ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಬೇಕೆಂದು ಒತ್ತಾಯಿಸಿದ್ದಾರೆ. ಸಿನಿಮಾ ರಂಗದಲ್ಲಿ ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಕಾಲಕ್ಕೆ ವೈದ್ಯಕೀಯ ಸೌಲಭ್ಯಗಳು ಬೇಕಿದೆ.

ಈ ನಿಟ್ಟಿನಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಮೂರು ಕಡೆಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಿದರೆ, ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಸದಸ್ಯರು ಹಾಗೂ ಅವರ ಕುಟುಂಬದವರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಸರ್ಕಾರಕ್ಕೆ ಮನವಿ ಪತ್ರ ಬರೆದಿದ್ದಾರೆ.

Related Posts

error: Content is protected !!