ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಕಲಾವಿದೆ ತಾರಾ ಅನುರಾಧಾ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕನ್ನಡ ಚಿತ್ರರಂಗದವರು ಹಾಗೂ ಸಿನಿಮಾ ಪತ್ರಕರ್ತರು ಪ್ರಚಾರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಸಲ್ಲಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಇದ್ದರು.