ಕೊರೊನಾ ಸಂಕಷ್ಟದಿಂದ ಚಿತ್ರೋದ್ಯಮ ಕೂಡ ರಂಗು ಕಳೆದುಕೊಂಡಿದೆ. ಇಲ್ಲಿ ದುಡಿಯುವ ಅದೆಷ್ಟೋ ಮನಸ್ಸುಗಳು ಕಂಗಾಲಾಗಿವೆ.
ಕಳೆದ ಒಂದು ವರ್ಷದಿಂದಲೂ ಕಾಡುತ್ತಿರುವ ಈ ಸೋಂಕಿನಿಂದ ಕನ್ನಡ ಚಿತ್ರರಂಗದ ಅನೇಕ ಕಾರ್ಮಿಕರು ತತ್ತರಿಸಿದ್ದಾರೆ.
ಈ ನಿಟ್ಟಿನಲ್ಲಿ ಕ್ರೇಜಿಸ್ಟಾರ್ ಪುತ್ರ ಮನುರಂಜನ್ ಕೂಡ ಸಿನಿಮಾ ಕಾರ್ಮಿಕರ ನೋವಿಗೆ ಸ್ಪಂದಿಸಿದ್ದಾರೆ.
ಸದ್ಯದ ಪರಿಸ್ಥಿ ಅರಿತ ಮನುರಂಜನ್, ತಾವು ಅಭಿನಯಿಸಿರುವ ‘ಮುಗಿಲ್ ಪೇಟೆ’ ಚಿತ್ರದಲ್ಲಿ ಕೆಲಸ ಮಾಡಿ ಕಳೆದಒಂದು ವರ್ಷದ ಈ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ.
ಈ ಸಿನಿಮಾಗೆ ತನುಮನ ಅರ್ಪಿಸಿದ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿರುವ ಅವರು, ‘ಮುಗಿಲ್ ಪೇಟೆ’ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಮನುರಂಜನ್ ಕಡೆಯಿಂದ 5000 ಹಣವನ್ನು ಅವರ ಖಾತೆಗೆ ಹಾಕಿದ್ದಾರೆ. ಈ ಮೂಲಕ ನನ್ನ ಕೈಲಾದ ಸಹಾಯ ಮಾಡಿದ್ದೇನೆ ಎಂದಿದ್ದಾರೆ ಮನುರಂಜನ್.