ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್; ಸಿಎಂ ಯಡಿಯೂರಪ್ಪ ಅವರಿಗೆ ಫಿಲ್ಮ್ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅಭಿನಂದನೆ

ಕನ್ನಡ ಚಿತ್ರೋದ್ಯಮದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅಭಿನಂದಿಸಿದ್ದಾರೆ.
ಕೊರೊನಾ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರೋದ್ಯಮಕ್ಕೆ ಆಸರೆಯಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು.

ಮುಖ್ಯಮಂತ್ರಿಯವರು ಮನವಿಗೆ ಸ್ಪಂದಿಸಿ ಪ್ಯಾಕೇಜ್ ನೀಡಿದ್ದಾರೆ. ಸಂಕಷ್ಟದಲ್ಲಿ ಪ್ಯಾಕೇಜ್ ನೀಡಿದ ಮುಖ್ಯಮಂತ್ರಿಯವರನ್ನು ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸುವುದಾಗಿ ಸುನೀಲ್ ಪುರಾಣಿಕ್ ಅವರು ತಿಳಿಸಿದ್ದಾರೆ.
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷದೊಂದಿಗೆ ಮುಖ್ಯಮಂತ್ರಿಯವರು ಎಲ್ಲರಿಗೂ ಕೊರೊನಾ ಸಂಕಷ್ಟದಲ್ಲಿ ಕೈಹಿಡಿದಿದ್ದಾರೆ. ಮೊದಲ ಪ್ಯಾಕೇಜ್ ನಲ್ಲಿ ಚಿತ್ರೋದ್ಯಮಕ್ಕೆ ಪ್ಯಾಕೇಜ್ ಕೈತಪ್ಪಿತ್ತು. ಆದರೆ, ತಾವು ಮಾಡಿದ ಮನವಿಗೆ ಅವರು ಇದೀಗ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಕೊರೊನಾ ಸಂದರ್ಭದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮುಖ್ಯಮಂತ್ರಿ ಅವರು ವಿಶೇಷ ಕಾಳಜಿಯಿಂದ ಆಹಾರ ಸಾಮಗ್ರಿಗಳ ಖರೀದಿಗೆ ಸಂಕಷ್ಟದಲ್ಲಿದ್ದ ಚಿತ್ರರಂಗದ 6500 ಮಂದಿಗೆ ತಲಾ 3000 ರೂ. ಮೌಲ್ಯದ ರಿಲೆಯನ್ಸ್ ಕೂಪನ್ ಕೊಡಿಸಿದ್ದರು. ಅಲ್ಲದೆ, ಇತ್ತೀಚಿಗೆ ಚಿತ್ರೋದ್ಯಮದವರಿಗಾಗಿ ವಿಶೇಷವಾಗಿ ಲಸಿಕೆಯನ್ನೂ ನೀಡಿ ಸಹಾಯ ಮಾಡಿದ್ದಾರೆ. ಇದನ್ನು ಕನ್ನಡ ಚಿತ್ರೋದ್ಯಮ ಸ್ಮರಿಸುತ್ತದೆ ಎಂದು ಸುನೀಲ್ ಪುರಾಣಿಕ್ ತಿಳಿಸಿದ್ದಾರೆ.

Related Posts

error: Content is protected !!