ಕೋವಿಡ್ ಎರಡನೇ ಅಲೆಯಿಂದ ಇಡೀ ದೇಶವೇ ನಲುಗಿದೆ. ಇದರಿಂದ ಎಲ್ಲಾ ಕ್ಷೇತ್ರಗಳಿಗು ಪೆಟ್ಟು ಬಿದ್ದಿದೆ. ಇದಕ್ಕೆ ಕನ್ನಡ ಚಿತ್ರರಂಗ ಕೂಡ ಹೊರತಲ್ಲ. ಕನ್ನಡ ಸಿನಿಮಾ ರಂಗ ಅನುಭವಿಸುತ್ತಿರುವ ನಷ್ಟ ಅಷ್ಟಿಷ್ಟಲ್ಲ. ಈ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಷ್ಟೋ ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ.
ಇಂತಹ ಸಮಯದಲ್ಲಿ ಅಂಹವರಿಗೆ ಕೈಲಾದಷ್ಟು ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ನಿರ್ಮಾಪಕರಾದ ರಮೇಶ್ ರೆಡ್ಡಿ, ಕೆ.ಮಂಜು ಹಾಗು ಗೆಳೆಯರು ನೂರಾರು ಕಾರ್ಮಿಕರಿಗೆ ಕಿಟ್ ವಿತರಿಸಿದ್ದಾರೆ.
ಹೌದು, ಜೂನ್ 11ರ ಶುಕ್ರವಾರ ಕೆ.ಆರ್ ರಸ್ತೆಯ ಗರಡಿ ಅಪಾರ್ಟ್ಮೆಂಟ್ ಪಕ್ಕದ ಮೈದಾನದಲ್ಲಿ ಸಿನಿಮಾ ಬರಹಗಾರರು, ಸಂಕಲನಕಾಋಉ, ಹಾಗೂ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡುವವರು ಮತ್ತು ಆರ್ ಪಿಗಳು ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಜನರಿಗೆ ದಿನಸಿ ಕಿಟ್ ವಿತರಿಸಿದ್ದಾರೆ.
ಈ ಹಿಂದೆ ಕೂಡ ಕೊರೊನಾ ಹಾವಳಿಗೆ ತತ್ತರಿಸಿದ್ದ ಜನರಿಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರ ನೇತೃತ್ವದಲ್ಲಿ ಆಹಾರ ಪದಾರ್ಥಗಳನ್ನು ಹಂಚಲಾಗಿತ್ತು. ಮುಂದೆಯೂ ಕೂಡ ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂಬುದು ನಿರ್ಮಾಪಕ ಕೆ.ಮಂಜು ಮಾತು.