ನಟ ಸಂಚಾರಿ ವಿಜಯ್ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆಗೆ ಮತ್ತು ತೊಡೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದ್ದು, ಈಗ ಮೆದುಳಿನ ರಕ್ತಸ್ರಾವದ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅಪಘಾತ ಹೇಗಾಯಿತು, ಏನಾಯಿತು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದರಿಂದ ಪ್ರಜ್ಜೆ ತಪ್ಪಿದ್ದ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯಕ್ಕೆ ಅವರು ಎಚ್ಚರಗೊಳ್ಳಲು ಇನ್ನು 48 ಗಂಟೆಗಳ ಸಮಯಬೇಕಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.