ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ,ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವಿಕ ವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ, “ಅನಿರೀಕ್ಷಿತ” ಚಿತ್ರದ ಕಥಾಹಂದರ.
ಲಾಕ್ ಡೌನ್ ಸಮಯ ವ್ಯರ್ಥ ಮಾಡಬಾರದೆಂದು ತಿಳಿದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ಫಲವಾಗಿ ಈ ಚಿತ್ರ ಮೂಡಿಬಂದಿದೆ.
ಕೇವಲ ಎರಡು ಪಾತ್ರಗಳನ್ನಿಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್ ಗಳಂತೆ ಬಳಸಿರುವುದು ಈ ಚಿತ್ರದ ವಿಶೇಷ.
ಚಿತ್ರೀಕರಣ, ನಂತರದ ಚಟುವಟಿಕೆಗಳು ಪೂರ್ಣವಾಗಿ ಬಿಡುಗಡೆಗೆ ಸಿದ್ದವಾಗಿದೆ.
ಲಾಕ್ ಡೌನ್ ಪೂರ್ಣವಾಗಿ ಚಿತ್ರಮಂದಿರ ತೆರವಿಗೆ ಅನುಮತಿ ದೊರಕಿದ ಕೂಡಲೆ ಚಿತ್ರಮಂದಿರ ಹಾಗೂ ಓಟಿಟಿ ಫ್ಲಾಟ್ ಫಾರಂನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ನಿರ್ಧರಿಸಿದೆ.
ಅನೀರಿಕ್ಷಿತ ಚಿತ್ರದ ಮೊದಲ ಪೋಸ್ಟರನ್ನು ನಾಗತಿಹಳ್ಳಿ ಚಂದ್ರಶೇಖರ್ ಅವರು ಬಿಡುಗಡೆ ಮಾಡಿದ್ದಾರೆ. ಎರಡು ಹಾಗೂ ಮೂರನೇ ಪೋಸ್ಟರನ್ನು ಗಿರಿಜಾ ಲೋಕೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅನಾವರಣಗೊಳಿಸಿದ್ದಾರೆ.
ಸದ್ಯದಲ್ಲೇ ಟ್ರೇಲರ್ ಸಹ ಬಿಡುಗಡೆಯಾಗಲಿದೆ.
ಎಸ್.ಕೆ.ಟಾಕೀಸ್ ಬ್ಯಾನರ್ ನಲ್ಲಿ ಶಾಂತಕುಮಾರ್ ನಿರ್ಮಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್ ಹಾಗೂ ಮಿಮಿಕ್ರಿ ದಯಾನಂದ್.
ಮಿಮಿಕ್ರಿ ದಯಾನಂದ್ ಅವರೆ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆಯನ್ನು ನೆಳ್ಳುಳ್ಳಿ ರಾಜಶೇಖರನ್ ಬರೆದಿದ್ದಾರೆ.
ಗುರುಕಿರಣ್ ಸಂಗೀತ ನೀಡಿದ್ದಾರೆ.
ಜೀವನ್ ಗೌಡ ಛಾಯಾಗ್ರಹಣ ಹಾಗೂ ರಘು ಅವರ ಸಂಕಲನ ಈ ಚಿತ್ರಕ್ಕಿದೆ.
ಚಿತ್ರದಲ್ಲಿ ಕೇವಲ ಎರಡುಪಾತ್ರಗಳಿದ್ದು, ಮಿಮಿಕ್ರಿ ದಯಾನಂದ್ ಹಾಗೂ ಭಾಮ ಅಭಿನಯಿಸಿದ್ದಾರೆ.
ಸಹ ನಿರ್ಮಾಪಕ ಸಂತೋಷ್ ಕೊಡೆಂಕೇರಿ ಈ ಚಿತ್ರದ ತಾಂತ್ರಿಕ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.