ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ವಿಜಯ್ ಕಿರಂಗದೂರು ಅವರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ “ಕೆ.ಜಿ.ಎಫ್-2” ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ.
ಖ್ಯಾತ ಮ್ಯೂಸಿಕ್ ಸಂಸ್ಥೆ ಲಹರಿ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.
ಹಲವು ಭಾಷೆಗಳಲ್ಲಿ ಕೆ.ಜಿ.ಎಫ್- 2 ಚಿತ್ರ ನಿರ್ಮಾಣವಾಗಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಎಲ್ಲಾ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆಯೇ ಖರೀದಿಸಿದೆ ಎಂಬುದು ವಿಶೇಷ.
ಕೆ.ಜಿ.ಎಫ್ 1 ಚಿತ್ರದ ಹಾಡುಗಳು ಸಹ ಲಹರಿ ಸಂಸ್ಥೆ ಮೂಲಕ ಹೊರಬಂದಿತ್ತು. ಗುರುವಾರ ಬೆಳಗ್ಗೆ ಚಿತ್ರದ ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಲಹರಿ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಆಡಿಯೋ ಹಕ್ಕು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥ ಲಹರಿ ವೇಲು ಅವರು ತಿಳಿಸಿದ್ದಾರೆ.