ನಿರ್ದೇಶಕ ಓಂಪ್ರಕಾಶ್ ರಾವ್ ಬಹಳ ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಓಂಪ್ರಕಾಶ್ ರಾವ್ 49 ನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ಆ ಚಿತ್ರದಲ್ಲಿ “ಡಾರ್ಲಿಂಗ್” ಕೃಷ್ಣ ನಾಯಕನಾಗಿ ನಟಿಸುತ್ತಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ “ಚಂದ್ರಲೇಖ ರಿಟರ್ನ್ಸ್” ಎಂದು ನಾಮಕರಣ ಮಾಡಲಾಗಿದ್ದು, ಇತ್ತೀಚೆಗೆ ಚಿತ್ರದ ಮುಹೂರ್ತ ನಡೆದಿದೆ.
ಆನಂದರಾವ್ ಸರ್ಕಲ್ ನ ಶ್ರೀವಿನಾಯಕ ದೇವಸ್ಥಾನದಲ್ಲಿ ನೆರವೇರಿದೆ
ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಶ್ರೀ ಭವಾನಿ ಆರ್ಟ್ಸ್ ಬ್ಯಾನರ್‌ನಲ್ಲಿ ರವೀಶ್ ಆರ್. ಸಿ. ಈ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರವೀಶ್ ಅವರು ನಿರ್ಮಿಸಿರುವ “ಕಸ್ತೂರಿ ಮಹಲ್” ಚಿತ್ರ ಕೂಡ ತೆರೆಗೆ ಬರಲು ಸಿದ್ದವಾಗಿದೆ.
“ಡಾರ್ಲಿಂಗ್” ಕೃಷ್ಣ ಅವರೊಂದಿಗೆ ಸಾಧುಕೋಕಿಲ, ನಾಗಶೇಖರ್, ವಿವಿನ್ ಸೂರ್ಯ, ಅಚ್ಯುತರಾವ್, ಸುಧಾ ಬೆಳವಾಡಿ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದು, ಸದ್ಯದಲ್ಲೇ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರವೀಶ್ ಆರ್ ಸಿ ತಿಳಿಸಿದ್ದಾರೆ.