ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರದ ಹೊಸ ಪೋಸ್ಟರ್ ರಿಲೀಅ್ ಆಗಿದೆ. ಹೌದು ಜುಲೈ 12 ಶಿವಣ್ಣ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹೊಸ ತಂಡ ಹೊಸ ಚಿತ್ರ ಅನೌನ್ಸ್ ಮಾಡಿದೆ. ಜೊತೆಗೆ ಚಿತ್ರತಂಡ ಶಿವಣ್ಣ ಅವರಿಗೆ ಶುಭಾಶಯ ಕೋರಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ.
ಬಾಲ ಶ್ರೀರಾಮ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. “ಪ್ರೊಡಕ್ಷನ್ ನಂ 1” ಚಿತ್ರದ ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ. ಇದು ಅವರ ಅಭಿನಯದ 124 ನೇ ಚಿತ್ರವೂ ಹೌದು.
ಹುಟ್ಟು ಹಬ್ಬದ ದಿನ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ ಚಿತ್ರತಂಡದ ಸದಸ್ಯರು ಶುಭ ಕೋರಿದ್ದಾರೆ.
ರಾಮ್ ದುಲಿಪುಡಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ.
70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಹೆಸರಾಂತ ನಟಿಯೊಬ್ಬರು ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಸದ್ಯದಲ್ಲೇ ಇದರ ಮಾಹಿತಿ ನೀಡುವುದಾಗಿ ಚಿತ್ರತಂಡ ತಿಳಿಸಿದೆ.
ಖ್ಯಾತ ನಟರಾದ ನಾಜರ್ ಹಾಗೂ ಸಂಪತ್ ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ತಮ್ಮ ಕಂಚಿನ ಕಂಠದ ಮೂಲಕ ಜನಮನಸೂರೆಗೊಂಡಿರುವ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ವಿಶೇಷ.
ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ ಅವರ ಛಾಯಾಗ್ರಹಣವಿದೆ.
”ಟಗರು” ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ.