ಯಜಮಾನನ ಜೊತೆ ಮತ್ತೆ ಹರಿಕೃಷ್ಣ ಸಿನ್ಮಾ ; ದಚ್ಚು 55ನೇ ಸಿನಿಮಾಗೆ ಶೈಲಜಾ ನಾಗ್ ನಿರ್ಮಾಪಕಿ

ಕನ್ನಡದ ಮಟ್ಟಿಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕೂಡ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿದವರು. ಸದ್ಯಕ್ಕೆ ಅವರ ಕೈಯಲ್ಲಿ ಒಂದಷ್ಟು ಸಿನಿಮಾಗಳಿವೆ. “ರಾಬರ್ಟ್‌” ನಂತರ 53 ನೇ ಚಿತ್ರ “ರಾಜವೀರ ಮದಕರಿನಾಯಕ” ಚಿತ್ರ ಮಾಡುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆ ಚಿತ್ರ ಕೂಡ ಸೆಟ್ಟೇರಿದ್ದು ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, “ರಾಬರ್ಟ್‌” ತಂಡದ ಜೊತೆ ಮತ್ತೊಂದು ಸಿನಿಮಾ ಮಾಡುವುದಾಗಿಯೂ ಈಗಾಗಲೇ ದರ್ಶನ್‌ ಅನೌನ್ಸ್‌ ಮಾಡಿದ್ದಾಗಿದೆ.

ಹಾಗಾದರೆ 54ನೇ ಚಿತ್ರ ಯಾರೊಂದಿಗೆ ಮಾಡ್ತಾರೆ ಅನ್ನೋದು ಪಕ್ಕಾ ಆಗಿಲ್ಲ. ಆದರೂ, ಉಮಾಪತಿ ಅವರಿಗೆ ಕಾಲ್‌ಶೀಟ್‌ ಕೊಟ್ಟಿದ್ದು ಕೂಡ ಸುದ್ದಿಯಾಗಿದೆ. ಇವುಗಳ ಜೊತೆಯಲ್ಲಿ ದರ್ಶನ್‌ಗೆ ಮತ್ತೊಂದು ಸಿನಿಮಾ ಕೂಡ ಆಗುತ್ತಿದೆ ಅನ್ನೋದೇ ಈ ಹೊತ್ತಿನ ವಿಶೇಷ. ಹೌದು, ದರ್ಶನ್‌ ಅವರಿಗೆ ಹೊಸ ಸಿನಿಮಾ ಕಥೆ ರೆಡಿಯಾಗುತ್ತಿದೆ. ಮತ್ತೊಂದು ಅದ್ಧೂರಿ ಬಜೆಟ್‌ನ ಚಿತ್ರ ಆಗಲಿದೆ ಎಂಬುದು ವಿಶೇಷತೆಗಳಲ್ಲೊಂದು. ಅದು ಅವರ ೫೫ನೇ ಸಿನಿಮಾ ಅನ್ನೋದು ವಿಶೇಷ.


ನಟ ದರ್ಶನ್‌ ಅವರಿಗೆ ನಿರ್ಮಾಪಕಿ ಶೈಲಜಾ ನಾಗ್‌ ಅವರು ಮತ್ತೆ ಸಿನಿಮಾವೊಂದನ್ನು ನಿರ್ಮಿಸುವ ಉತ್ಸಾಹ ತೋರಿದ್ದಾರೆ. ಅದು ದರ್ಶನ್‌ ಅವರ 55ನೇ ಸಿನಿಮಾ ಆಗಲಿದೆ ಎಂಬುದು ವಿಶೇಷ. ಈ ವಿಷಯವನ್ನು ಸ್ವತಃ ಶೈಲಜಾ ನಾಗ್‌ ಅವರೇ ತಮ್ಮ ಮುಖಪುಟದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ಗೆ ಈಗ ಎಲ್ಲೆಡೆಯಿಂದಲೂ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದೆ. ಈ ಹಿಂದೆ ದರ್ಶನ್‌ ಅವರಿಗೆ “ಯಜಮಾನ” ಚಿತ್ರ ನಿರ್ಮಿಸಿದ್ದ ಶೈಲಜಾ ನಾಗ್‌ ಅವರೇ ದರ್ಶನ್‌ ಅವರಿಗೆ ಮತ್ತೊಂದು ದೊಡ್ಡ ಚಿತ್ರ ಮಾಡಲು ತಯಾರಿ ನಡೆಸಿದ್ದಾರೆ. ಹಾಗೆ ನೋಡಿದರೆ, “ಯಜಮಾನ” ಸಿನಿಮಾ ಆಗುವ ಸಂದರ್ಭದಲ್ಲೇ ನಿರ್ಮಾಪಕರು ದರ್ಶನ್‌ ಅವರಿಗೆ ಅಡ್ವಾನ್ಸ್‌ ಕೊಟ್ಟಿದ್ದರು.

ಆ ಚಿತ್ರದ ಕಥೆಯ ಕೆತ್ತನೆಯ ಕೆಲಸ ಜೋರಾಗಿಯೇ ನಡೆಯುತ್ತಿದೆ. ಇನ್ನು, ದರ್ಶನ್‌ ಅವರ ಮುಂದಿನ ಸಿನಿಮಾಗೆ “ಯಜಮಾನ” ಚಿತ್ರವನ್ನು ನಿರ್ದೇಶನ ಮಾಡಿದ್ದ ಹರಿಕೃಷ್ಣ ಅವರೇ ದರ್ಶನ್‌ ಅವರಿಗೆ ಹೊಸ ಚಿತ್ರ ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಇದೆ. ಈಗಾಗಲೇ ಹರಿಕೃಷ್ಣ ಅವರು ತಮ್ಮದ್ದೊಂದು ತಂಡ ಕಟ್ಟಿಕೊಂಡು ಕಥೆ, ಚಿತ್ರಕಥೆ ಬರೆಯುವಲ್ಲಿ ನಿರತರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಯಾವಾಗ ಸಿನಿಮಾ ಸೆಟ್ಟೇರಲಿದೆ ಎಂಬುದಕ್ಕೆ ಇಷ್ಟರಲ್ಲೇ ಉತ್ತರ ಸಿಗಲಿದೆ.
ಇದರ ಜೊತೆ ಜೊತೆಯಲ್ಲೇ ಅವರು “ರಾಜವೀರ ಮದಕರಿನಾಯಕ” ಸಿನಿಮಾ ಚಿತ್ರೀಕರಣದಲ್ಲೂ ತೊಡಗಿಕೊಳ್ಳಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿದ್ದು,

ಆ ಬಳಿಕ ಅವರು, ತರುಣ್‌ ಸುಧೀರ್‌ ನಿರ್ದೇಶನದಲ್ಲಿ ಮತ್ತೊಂದು ಹೊಸ ಸಿನಿಮಾಗೆ ಮುಂದಾಗುತ್ತಾರೋ ಅಥವಾ ಹರಿಕೃಷ್ಣ ಅವರ ಹೊಸ ಚಿತ್ರದಲ್ಲಿ ಎಂಟ್ರಿಯಾಗುತ್ತಾರೋ ಎಂಬುದು ಗೌಪ್ಯ. ಆದರೆ, ಹರಿಕೃಷ್ಣ ಅವರೊಂದಿಗೆ ಮತ್ತೊಂದು ಸಿನಿಮಾ ಆಗುತ್ತಿರುವುದಂತೂ ನಿಜ. “ಯಜಮಾನ” ಬಳಿಕ ಹೊಸ ಸಿನಿಮಾ ಇನ್ನೂ ಹೊಸತನದಲ್ಲಿರಲ್ಲಿದ್ದು, ಪಕ್ಕಾ ಮಾಸ್‌ ಅಂಶಗಳೊಂದಿಗೆ ಪಡ್ಡೆಗಳೂ ಸೇರಿದಂತೆ ದರ್ಶನ್ ಅಭಿಮಾನಿಗಳಿಗೊಂದು ರಗಡ್‌ ಸಿನಿಮಾ ಮಾಡಬೇಕೆಂಬ ಹಠದಲ್ಲೇ ಹರಿಕೃಷ್ಣ ಸದ್ಯಕ್ಕೆ ಸ್ಕ್ರಿಪ್ಟ್‌ನಲ್ಲಿ ಮಗ್ನರಾಗಿದ್ದಾರೆ.

Related Posts

error: Content is protected !!