ನಟ ಪುನೀತ್ ರಾಜ್ ಕುಮಾರ್ ಅವರ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಫ್ಯಾಮಿಲಿ ಫ್ಯಾಕ್ ಶೂಟಿಂಗ್ ಮುಗಿದಿದೆ. ಒಟ್ಟು ಮೂವತ್ತಕ್ಕೂ ಹೆಚ್ಚು ದಿನಗಳ ಕಾಲ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರ ತಂಡ ಚಿತ್ರೀಕರಣ ನಡೆಸಿದೆ. ಚಿತ್ರೀಕರಣದ ಕೊನೆಯ ದಿನ ಚಿತ್ರದ ನಿರ್ಮಾಪಕರು ಆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ದಂಪತಿ ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿ, ಚಿತ್ರೀಕರಣ ವೀಕ್ಷಿಸಿದರು. ಹಾಗೆಯೇ ಚಿತ್ರ ತಂಡದ ಪ್ರತಿಯೊಬ್ಬರ ಕೆಲಸವನ್ನು ಮೆಚ್ಚಿಕೊಂತು ತಂಡಕ್ಕೆ ಶುಭ ಕೋರಿದ್ದಾಗಿ ನಿರ್ದೇಶಕ ಅರ್ಜುನ್ ಕುಮಾರ್ ಹೇಳುತ್ತಾರೆ.
ಶೂಟಿಂಗ್ ಸೆಟ್ ಗೆ ಪುನೀತ್ ರಾಜ್ ಕುಮಾರ್ ಬಂದ ಸಂದರ್ಭ
ಕನ್ನಡ ಚಿತ್ರರಂಗರದಲ್ಲಿನ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದೇ ಶುರುವಾಗಿರುವ ಪುನೀತ್ ರಾಜ್ ಕುಮಾರ್ ಹಾಗೂ ಅಶ್ವಿನಿದಂಪತಿಗಳ ಪಿಆರ್ ಕೆ ಪ್ರೋಡಕ್ಷನ್ ಸಂಸ್ಥೆ ಈಗಾಗಲೇ ಮೂರ್ನಾಲ್ಕು ಚಿತ್ರಗಳನ್ನು ನಿರ್ಮಿಸಿ ತೆರೆಗೆ ತಂದಿದೆ. ಅಷ್ಟು ಚಿತ್ರಗಳೂ ಸದಭಿರುಚಿಯೇ ಚಿತ್ರಗಳೆ. ಆ ಸಾಲಿಗೆ ಸೇರುವ ಮತ್ತೊಂದು ಚಿತ್ರವೇ ಫ್ಯಾಮಿಲಿ ಪ್ಯಾಕ್.
ಸೆಟ್ ನಲ್ಲಿ ನಿರ್ದೇಶಕ ಅರ್ಜುನ್ ಜತೆಗೆ ಪುನೀತ್ ರಾಜ್ ಕುಮಾರ್
ಆದಿನ ಚಿತ್ರೀಕರಣದ ಸೆಟ್ ನಲ್ಲಿ ಚಿತ್ರದ ನಾಯಕ ಲಿಖಿತ್ ಶೆಟ್ಟಿ, ನಾಯಕಿ ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಪದ್ಮಜಾರಾವ್, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮುಂದಿನ ಕಲಾವಿದರು ಅಂದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಚಿತ್ರೀಕರಣದ ಕೊನೆಯ ದಿನ ಚಿತ್ರ ತಂಡ ಕ್ಯಾಮೆರಾಕ್ಕೆ ಪೋಸು ನೀಡಿದ್ದು
ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ . ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ ಅರ್ಜುನ್ ಕುಮಾರ್ “ಫ್ಯಾಮಿಲಿ ಪ್ಯಾಕ್” ನ ನಿರ್ದೇಶಕ.ನಿರ್ಮಾಪಕ ಲಿಖಿತ್ ಶೆಟ್ಟಿ ಅವರು ಈ ಚಿತ್ರದ ನಾಯಕ ಕೂಡ. ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆದಿದ್ದಾರೆ.