ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ “ಶಾರ್ದೂಲ” ಚಿತ್ರದ “ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ.
ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಬ್ಯಾನರ್‌ನಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.
ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ.
ಈ ಹಿಂದೆ “ನಮ್ ಏರಿಯಾಲ್ಲೊಂದು ದಿನ” “ತುಘಲಕ್” ಹಾಗೂ “ಹುಲಿರಾಯ” ಚಿತ್ರಗಳನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದರು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಅರವಿಂದ್ ಕೌಶಿಕ್, ಈ ಚಿತ್ರಕ್ಕೆ “ದೆವ್ವ ಇರಬಹುದಾ” ಎಂಬ ಅಡಿಬರಹ ಕೊಟ್ಟಿದ್ದಾರೆ.
ವೈ.ಜಿ.ಆರ್ ಮನು ಛಾಯಾಗ್ರಹಣವಿದೆ. ಸತೀಶ್ ಬಾಬು ಸಂಗೀತ ನೀಡಿದ್ದಾರೆ. ಶಿವರಾಜ್ ಮೇಹು ಸಂಕಲನ ಮಾಡಿದರೆ, ಮಾಸ್ ಮಾದ, ವೈಲೆಂಟ್ ವೇಲು ಮತ್ತು ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನವಿದೆ.
ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.