ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಹೀಗೊಂದು ಸಂತಸದ ಸುದ್ದಿ. ಅದೇನಪ್ಪಾ ಅಂದ್ರೆ, ಅವರ ಅಭಿನಯದ ‘ಕೋಟಿಗೊಬ್ಬ 3’ ಬಿಡುಗಡೆ ಸುದ್ದಿ.
ಹೌದು, ಕೊರೊನಾ ಹಾವಳಿಯಿಂದಾಗಿ ಇಡೀ ಚಿತ್ರರಂಗವೇ ನಲುಗಿತ್ತು. ಈಗ ಚಿತ್ರಮಂದಿರಗಳಲ್ಲಿ ಸರ್ಕಾರ ಶೇ.50ರಷ್ಟು ಭರ್ತಿಗೆ ಅವಕಾಶ ಕೊಟ್ಟಿದೆ. ಇದರ ಬೆನ್ನಲ್ಲೇ ಶಿವರಾಜ ಕುಮಾರ್ ಅಭಿನಯದ ‘ಭಜರಂಗಿ -2’ ‘ದುನಿಯಾ’ವಿಜಯ್ ಅಭಿನಯದ ‘ಸಲಗ’, ‘ಡಾಲಿ’ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾಗಳು ಬಿಡುಗಡೆಯನ್ನು ಘೋಷಿಸಿಕೊಂಡಿವೆ.
ಸುದೀಪ್ ಫ್ಯಾನ್ಸ್ ಕೂಡ ‘ಕೋಟಿಗೊಬ್ಬ 3’ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ. ಯಾವಾಗ ರಿಲೀಸ್ ಆಗುತ್ತೋ ಏನೋ ಅಂತಂದುಕೊಂಡಿದ್ದ ಫ್ಯಾನ್ಸ್ ಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸುದೀಪ್ ಹುಟ್ಟುಹಬ್ಬಕ್ಕೆ ರಿಲೀಸ್ ಆಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 2 ಸುದೀಪ್ ಅವರ ಹುಟ್ಟುಹಬ್ಬ. ಅಂದು ಅವರ ಅಭಿನಯದ ‘ಕೋಟಿಗೊಬ್ಬ 3’ ರಿಲೀಸ್ ಆಗಲಿದೆ ಎಂಬ ಸುದ್ದಿ ಹರಡಿದೆ. ನಿರ್ಮಾಪಕ ಸೂರಪ್ಪ ಬಾಬು ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ. ಈಗಾಗಲೇ ಚಿತ್ರ ಪೂರ್ಣ ರೆಡಿಯಾಗಿ ಬಿಡುಗಡೆಗೆ ಸಜ್ಜಾಗಿದೆ. ಇನ್ನೇನಿದ್ದರೂ ಥಿಯೇಟರ್ ಕಡೆ ಲಗ್ಗೆ ಇಡಬೇಕಷ್ಟೆ.
ಈ ಚಿತ್ರದ ಡಬ್ಬಿಂಗ್ ಕೆಲಸ ಮುಗಿಸಿದ ಬಳಿಕ ಸುದೀಪ್ ಇಷ್ಟರಲ್ಲೆ ಸಿನಿಮಾ ರಿಲೀಸ್ ಆಗಲಿದೆ ಎಂದಿದ್ದರು. ಇನ್ನು ಈ ಚಿತ್ರ ಬಹುತೇಕ ವಿದೇಶದಲ್ಲೇ ಚಿತ್ರೀಕರಣಗೊಂಡಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್ 2 ರಂದು ಚಿತ್ರ ಬಿಡುಗಡೆ ಆಗಲಿದೆ. ಕಿಚ್ಚನ ಹುಡುಗರು ಸದ್ಯ ಸುದೀಪ್ ಹುಟ್ಟುಹಬ್ಬಕ್ಕಾಗಿ ಕಾಯುತ್ತಿದ್ದಾರೆ. ಅಂದೇಎ ಕೋಟಿಗೊಬ್ಬನ ದರ್ಶನ ಮಾಡುವ ಉತ್ಸಾಹದಲ್ಲಿದ್ದಾರೆ.