ರಾಜ್‌ ಕುಮಾರ್‌ ಅಂದ್ರೆ ಪ್ರಜ್ವಲಿಸುವ ನಕ್ಷತ್ರ ಅಂದ್ರು ಸಿಎಂ ಬಸವರಾಜ್‌ ಬೊಮ್ಮಾಯಿ !

ಆಕಾಶದಲ್ಲಿ ಹಲವಾರು ನಕ್ಷತ್ರಗಳಿರಬಹುದು, ಆದರೆ ಒಂದೇ ಒಂದು ನಕ್ಷತ್ರ ಹೆಚ್ಚಾಗಿ ಮಿಂಚುತ್ತಿರುತ್ತದೆ, ಆ ನಕ್ಷತ್ರವೇ ರಾಜ್‌ಕುಮಾರ್..

-ರಾಜ್‌ ಕುಮಾರ್‌ ಅವರನ್ನು ಹೀಗೆ ವರ್ಣನೆ ಮಾಡಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಡಾ. ರಾಜ್‌ ಕುಮಾರ್‌ ಅಕಾಡೆಮಿಯಿಂದ ರೂಪಿಸಿದ ಡಾ.ರಾಜ್‍ಕುಮಾರ್ ಲರ್ನಿಂಗ್ ಆಪ್ ಬಿಡುಗಡೆ ಮಾಡಿ ಮಾತನಾಡಿದರು.

ಡಾ.ರಾಜ್‍ಕುಮಾರ್ ಅಂದರೆ ಒಬ್ಬ ಸಾಧಕ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ. ಕರ್ನಾಟಕದ ಅಂಥ ಏಕಮೇವ ತಾರೆ ಅಂದರೆ ಡಾ.ರಾಜ್‍ಕುಮಾರ್ ಅವರೊಬ್ಬರೆ ಮಾತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.21 ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ.ರಾಜ್‍ಕುಮಾರ್ ಅವರ ಆಪ್ ದೊಡ್ಡ ಕೊಡುಗೆ ನೀಡಿದೆ. ಮಕ್ಕಳಿಗೆ ತರ್ಕ ಬದ್ಧವಾಗಿ ಚಿಂತನೆ ಮಾಡಲು ಪ್ರೇರೇಪಿಸಬೇಕು. ಆಗ ಸಹಜವಾಗಿ ಅವರ ಸ್ಮೃತಿ ಪಟಲದಲ್ಲಿ ಉಳಿಯುತ್ತದೆ ಎಂದರು.

ಆಪ್ ಗಳ ಮೂಲಕ ಜಗತ್ತನ್ನು ತಲುಪಲು ಸಾಧ್ಯ. ನೂತನ ಶಿಕ್ಷಣ ನೀತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದು, ಈ ಆಪ್ ಶಿಕ್ಷಣ ನೀತಿಗೆ ಉಪಯುಕ್ತವಾಗಲಿದೆ. ಭಾರತದಲ್ಲಿಯೇ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ತಿಳಿಸಿದರು.ಡಾ.ರಾಜ್‍ಕುಮಾರ್ ಅಂದರೆ ಒಬ್ಬ ಸಾಧಕ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ. ಕರ್ನಾಟಕದ ಅಂಥ ಏಕಮೇವ ತಾರೆ ಅಂದರೆ ಡಾ.ರಾಜ್‍ಕುಮಾರ್. ಅವರ ಸರಳತೆ, ನಡೆ, ನುಡಿ , ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರಿಗಳು, ಜನಪ್ರಿಯ ವ್ಯಕ್ತಿಗಳು ಕಲಿಯಬೇಕು ಎಂದರು. ಈಗಷ್ಟೇ ಹುಟ್ಟಿರುವ ಮಗುವಿನ ಮುಗ್ಧತೆ ಅವರಲ್ಲಿತ್ತು ಎಂದು ಹೇಳಿದರು.

ಮಗುವಿನಲ್ಲಿರುವ ಕುತೂಹಲಕ್ಕೆ ಜ್ಞಾನ, ಅರ್ಥವನ್ನು ಕೊಡಬೇಕು. ಡಾ.ರಾಜ್‍ಕುಮಾರ್ ನಿರಂತರ ವಿದ್ಯಾರ್ಥಿಯಾಗಿದ್ದರೂ, ಮುಗ್ಧತೆ ಸದಾಕಾಲ ಇರುತ್ತಿತ್ತು ಎಂದರು. ರಾಘವೇಂದ್ರ ರಾಜಕುಮಾರ್, ಪುನೀತ್ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related Posts

error: Content is protected !!