ರಾಜೀವ್‌ ʼಉಸಿರೇʼ ಗೆ ಕಿಚ್ಚ ಸುದೀಪ್ ಕೊಟ್ಟರು ಸಾಥ್‌ : ರಿವೀಲ್‌ ಆಯ್ತು ಮೋಷನ್‌ ಪೋಸ್ಟರ್‌ !

ಬಿಗ್ ಬಾಸ್ ಸೀಸನ್‌ 8 ರಲ್ಲಿನ ಕಂಟೆಸ್ಟೆಂಟ್‌ ಗಳಲ್ಲಿ ಒಬ್ಬರಾಗಿದ್ದ ನಟ ರಾಜೀವ್‌ ಈಗ ಉಸಿರೇ ಉಸಿರೇ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ನಾಯಕರಾಗಿ ಅಭಿನಯಿಸುತ್ತಿದ್ದು, ಅದರ ಮೋಷನ್‌ ಪೋಸ್ಟರ್‌ ಈಗ ಲಾಂಚ್‌ ಆಗಿದೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಉಸಿರೇ ಉಸಿರೇ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಬಾದ್ ಷಾ ಕಿಚ್ಚ ಸುದೀಪ ‌ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರು.ಪದೀಪ್‌ ಈ ಚಿತ್ರದ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ನಟ ರಾಜೀವ್‌ ಮಾತನಾಡಿ, ʼನಾನು ಈ ತನಕ ಕೆಲವು ಚಿತ್ರಗಳಲ್ಲಿ ನಟಿಸಿದ್ದರೂ, ಇಂತಹ ವೇದಿಕೆ ಸಿಗಲು 10 ವರ್ಷ ಬೇಕಾಯಿತು. ಈ ಅವಕಾಶ ಮಾಡಿಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಹೇಳಿದರು.

ಮೋಷನ್ ಪೋಸ್ಟರ್ ಬಿಡುಗಡೆಗೆ ಆಗಮಿಸಿರುವ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು. ʼನಾನು ಸುದೀಪ್ ಸರ್ ಜೊತೆ ಕಾರಿನಲ್ಲಿ ಬರುತ್ತಿದ್ದಾಗ, ಅವರ ನಟನೆಯ ಚಿತ್ರದ “ಉಸಿರೇ ಉಸಿರೇ” ಹಾಡು ಕೇಳಿದ್ದೆ. ನನಗೆ ಈ ಚಿತ್ರದ ಗೊತ್ತಿದ್ದರಿಂದ ನಿರ್ದೇಶಕರಿಗೆ ಫೋನ್ ಮಾಡಿ ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಡೋಣ. ಈಗಲೇ ನೊಂದಾಯಿಸಿ ಎಂದು ಹೇಳಿದೆ. ಚಿತ್ರಕ್ಕಾಗಿ ನಾನು ಹೆಚ್ಚು ವರ್ಕ್ ಔಟ್ ಏನು ಮಾಡಿಲ್ಲ. ಸಹಜವಾಗಿರುವ ಪಾತ್ರ. ನಮ್ಮ ನಾಲ್ಕುವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ ಎಂದರು ರಾಜೀವ್.

ಇದೊಂದು ಪಕ್ಕಾ ಪ್ರೇಮಕಥೆ.‌ ಇಲ್ಲಿಯವರೆಗೂ ಅನೇಕ ಪ್ರೇಮಕಥೆಯುಳ್ಳ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ. ಅಮರಪ್ರೇಮಿಗಳು ಎಂದರೆ ಎಲ್ಲರೂ ರೋಮಿಯೋ – ಜೂಲಿಯಟ್, ಸಲೀಂ – ಅನಾರ್ಕಲಿ ಅನ್ನುತ್ತಾರೆ. ಈ ಚಿತ್ರ ನೋಡಿದ ಮೇಲೆ ಪ್ರೇಕ್ಷಕರು ನಮ್ಮ ಕಥಾನಾಯಕ – ನಾಯಕಿಯನ್ನು ಈ ಸಾಲಿಗೆ‌ ಸೇರಿಸಬಹುದು ಎಂದ ನಿರ್ದೇಶಕ ಸಿ.ಎಂ.ವಿಜಯ್ ಸೆಪ್ಟೆಂಬರ್ ಅಂತ್ಯದಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ಹೇಳಿದ್ದಾರೆ. ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ರಾಜೀವ್‌ ಅವರಿಗೆ ಇಲ್ಲಿ ಶ್ರೀಜಿತ ಘೋಷ್ ನಟಿಸುತ್ತಿದ್ದು, ಅವರು ಸಹ ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆ ಮಾತನಾಡಿದರು.‌ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಶ್ರೀಜಿತ ಅವರಿಗೆ ಕನ್ನಡದಲ್ಲಿ ಇದು ಚೊಚ್ಚಲ ಚಿತ್ರ. ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಅವರ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ.

Related Posts

error: Content is protected !!