ಜಗತ್ತು ಎಷ್ಟೇ ಬದಲಾದರೂ ಕೂಡ ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯ- ದಬ್ಬಾಳಿಕೆ- ಅತ್ಯಾಚಾರ ಮಾತ್ರ ನಿಲ್ಲುತ್ತಿಲ್ಲ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಧ್ಯಾರ್ಥಿನಿ ಮೇಲೆ ನಡೆದಂತಹ ಸಾಮೂಹಿಕ ಅತ್ಯಾಚಾರಕ್ಕೆ ಇಡೀ ಕರುನಾಡೇ ಬೆಚ್ಚಿಬಿದ್ದಿದೆ. ಅತ್ಯಾಚಾರವೆಸಗಿ ತಲೆಮರೆಸಿಕೊಂಡಿರುವ ಕೀಚಕರಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಮಧ್ಯೆ ಸ್ಯಾಂಡಲ್ ವುಡ್ ನ ಹಿರಿಯ ನಟಿ ಶ್ರುತಿ ಘಟನೆಯಿಂದ ಮನನೊಂದು, ಕೀಚಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼ ಹೆಣ್ಣುಮಕ್ಕಳ ಮೇಲೆ ನಿರಂತರವಾಗಿ ನಡಿಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ ? ಇಂತ ಪುರುಷರ ಮನಸ್ಥಿತಿ ಬದಲಾಗುವುದೆಂದು? ಇಂತ ಅನಿಷ್ಟ ಕಾಮುಕರನ್ನ ಬಂಧಿಸುವ, ಅವರನ್ನು ಶಿಕ್ಷಿಸುವ ಕಾನೂನು ಮತ್ತಷ್ಟು ಗಟ್ಟಿ ಆಗಬೇಕು ಎನ್ನುವುದು ಎಷ್ಟು ಸತ್ಯವೋ, ಇಂಥಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ, ಪೋಷಕರ ಜವಾಬ್ದಾರಿ ಅಲ್ಲಿಯೂ ಕೂಡ ಮತ್ತಷ್ಟು ಗಟ್ಟಿಯಾಗ್ಬೇಕು ಎನ್ನುವುದು ನನ್ನ ಅಭಿಪ್ರಾಯ ಹೌದಲ್ಲವೇ.. ಹುಟ್ಟಿನಿಂದ ಸಾವಿನವರೆಗೆ ಹೆಣ್ಣುಮಕ್ಕಳು ಅನುಭವಿಸುವ ಕಷ್ಟ ನೂರಾರು ಆದರೂ ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತ ಸಾಧನೆಯನ್ನು ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ. ಹಾಗಾಗದಿರಲಿ ಎಂದು ನಟಿ ಶ್ರುತಿ ಸೋಷಲ್ ಮೀರಿಯಾದಲ್ಲಿ ತಮ್ಮ ಅಭಿಪ್ರಾಯ ಷೇರ್ ಮಾಡಿದ್ದಾರೆ.