ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ , ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ.
ಸೆಪ್ಟೆಂಬರ್ 10 ಗಣೇಶ ಚತುರ್ಥಿಯ ಸಂಭ್ರಮ. ಆ ಶುಭದಿನದಂದು “ಶುಗರ್ ಫ್ಯಾಕ್ಟರಿ” ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸಾಂಗ್ ಟೀಸರ್ ಬರಲಿದೆ.
ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ.
ಡಾರ್ಲಿಂಗ್ ಕೃಷ್ಣ ಅವರೊಡನೆ ಈ ಹಾಡಿಗೆ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ. ಧನಂಜಯ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಗೋವಾದಲ್ಲಿ ಈ ಹಾಡನ್ನು ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಸೆರೆ ಹಿಡಿದಿದ್ದಾರೆ.
ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಗಿರೀಶ್ ಆರ್. ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.