ಗಣೇಶನ ಹಬ್ಬಕ್ಕೆ ಲಂಕೆ ಲಗ್ಗೆ! 200ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಪ್ರದರ್ಶನ !

ಲೂಸ್ ಮಾದ ಯೋಗೇಶ್ ಅಭಿನಯದ “ಲಂಕೆ” ಚಿತ್ರ ಸೆಪ್ಟೆಂಬರ್ 10 ಗಣೇಶನ ಹಬ್ಬದ ಶುಭದಿನದಂದು ರಾಜ್ಯಾದ್ಯಂತ 200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಮೆಚ್ಚುಗೆ ಪಡೆದಿದೆ.

ಕೆಲವು ಚಿತ್ರಗಳಿಗೆ ಶುರುವಲ್ಲೇ ತೊಂದರೆಗಳು ಎದುರಾಗುತ್ತವೆ. ಆದರೆ ನಮ್ಮ ಚಿತ್ರ ಯಾವುದೇ ತೊಂದರೆಯಿಲ್ಲದೇ ಬಿಡುಗಡೆ ಹಂತಕ್ಕೆ ಬಂದಿದೆ. ಅದಕ್ಕೆ ಕಾರಣ ನಮ್ಮ ಚಿತ್ರದ ನಿರ್ಮಾಪಕರಾದ ಪಟೇಲ್ ಶ್ರೀನಿವಾಸ್. ಅವರ ಪ್ರೋತ್ಸಾಹಕ್ಕೆ ಅನಂತ ಧನ್ಯವಾದ ಅಂತ ಪ್ರೀತಿಯಿಂದ ಹೇಳಿಕೊಂಡರು ನಿರ್ದೇಶಕ ರಾಮಪ್ರಸಾದ್.
ಈ ಚಿತ್ರ ಇನ್ನಷ್ಟು ಅದ್ದೂರಿಯಾಗಿ ನಿರ್ಮಾಣ ಮಾಡಬೇಕೆಂದು ಕೊಂಡಾಗ ನನ್ನ ಬೆಂಬಲಕ್ಕೆ ನಿಂತವರು ನನ್ನ ಪತ್ನಿ ಸುರೇಖ ರಾಮಪ್ರಸಾದ್.
ನಾಯಕ ಯೋಗಿ, ಕೃಷಿ ತಾಪಂಡ ಸೇರಿದಂತೆ ಚಿತ್ರತಂಡದ ಸದಸ್ಯರ ಹಾಗೂ ಮಿತ್ರರಾದ ರಕ್ಷಿತ್ ಮಹೇಂದ್ರ, ಹರ್ಷ ಮಹೇಂದ್ರ, ನಂಜುಂಡ ಮೂರ್ತಿ ಮುಂತಾದವರು ಮಾಡಿರುವ ಉಪಕಾರ ಬಹಳವಾದದ್ದು. ಎಲ್ಲರಿಗೂ ತುಂಬು ಹೃದಯದ ಧನ್ಯವಾದ ಅರ್ಪಿಸಿದ ರಾಮಪ್ರಸಾದ್, ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರಲಿದೆ ನೋಡಿ ಹರಸಿ ಎಂದರು.

ನಾನು ನಮ್ಮ ತಂದೆಯವರು ನಿರ್ಮಿಸಿದ್ದ ಚಿತ್ರಗಳಲ್ಲೇ ಇಷ್ಟು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿಲ್ಲ.. ಆದರೆ ಈ ಚಿತ್ರದ ಎಲ್ಲಾ ರೀತಿಯ ಪ್ರಚಾರ ಕಾರ್ಯಗಳಲ್ಲೂ ನಾನು ಭಾಗಿಯಾಗಿದ್ದೇನೆ ಎಂದ ನಾಯಕ ಲೂಸ್ ಮಾದ ಯೋಗೇಶ್ ಒಳ್ಳೆಯ ತಂಡದ ಜೊತೆ ಕೆಲಸ ಮಾಡಿದ ಖುಷಿಯಿದೆ. ಗಣಪತಿ ಹಬ್ಬಕ್ಕೆ ಚಿತ್ರ ಬರುತ್ತಿದೆ ನೋಡಿ ಹಾರೈಸಿ ಎಂದರು ಯೋಗಿ.

ಚಿತ್ರದ ಬಗ್ಗೆ ಹೇಳುವುದೆಲ್ಲಾ ಹಿಂದೆ ಹೇಳಿ ಆಗಿದೆ..ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ..ನಿಮ್ಮೆಲ್ಲರ ಪ್ರೋತ್ಸಾಹದಿಂದ ಚಿತ್ರ ಗೆಲ್ಲುವ ಭರವಸೆಯಿದೆ ಎನ್ನುತ್ತಾರೆ ನಾಯಕಿ ಕೃಷಿ ತಾಪಂಡ.

ನಿರ್ಮಾಪಕರಾದ ಪಟೇಲ್ ಶ್ರೀನಿವಾಸ್, ಸುರೇಖ ರಾಮಪ್ರಸಾದ್ ಹಾಗೂ ಕಲಾವಿದರಾದ ಮಾಸ್ಟರ್ ಮಿಥುನ್ ಗೌಡ, ಬೇಬಿ ಜನ್ಯ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ‌ ಹಾಜರಿದ್ದು, ಚಿತ್ರದ ಬಗ್ಗೆ ಮಾತನಾಡಿದರು.
.
ರಾಮಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ ಪ್ರಾಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ.

ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಲೂಸ್ ಮಾದ ಯೋಗೇಶ್ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ, ಆದ್ಯ ನಾಯಕ್, ಮಿಥುನ್ ಗೌಡ, ಬೇಬಿ ಜನ್ಯ ಮುಂತಾದವರು ಈ ಚಿತ್ರದಲ್ಲಿದ್ದಾರೆ.

Related Posts

error: Content is protected !!