ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಚಿತ್ರವಿದು. ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ಫಸ್ಟ್ ಲುಕ್ ಅನ್ನು ನಾಗತಿಹಳ್ಳಿ ಚಂದ್ರಶೇಖರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಚಿತ್ರದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು,
ಅನಿತಾ ಭಟ್, ಎಂ.ಕೆ.ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ಪ್ರತಿಭಾನ್ವಿತ ಕಲಾವಿದರ ತಂಡ ಚಿತ್ರದಲ್ಲಿದೆ.
ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ, ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದೆ.
ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ.ಪಿ ಹೆಬ್ಬಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಹಣ , ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಕನ್ನೇರಿ ಚಿತ್ರಕ್ಕಿದೆ.