ಶೂಟಿಂಗ್ ಗೆ ರೆಡಿಯಾದ ಟೆನೆಂಟ್ ಟೀಮ್!

ಯುವ ಪ್ರತಿಭೆ ಶ್ರೀಧರ್ ಶಾಸ್ತ್ರಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾ ‘ಟೆನೆಂಟ್’. ಟೈಟಲ್ ಹಾಗೂ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿರುವ ಚಿತ್ರತಂಡ, ಮುಂದಿನ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.

‘ಅನ್ ಲಾಕ್’ ಕಿರುಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಶ್ರೀಧರ್ ಶಾಸ್ತ್ರಿ, ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಜವಾಬ್ದಾರಿಯನ್ನು ಶ್ರೀಧರ್ ಶಾಸ್ತ್ರಿಯವರೇ ಹೊತ್ತುಕೊಂಡಿದ್ದಾರೆ.

ಧರ್ಮ ಕೀರ್ತಿರಾಜ್, ತಿಲಕ್ ಶೇಖರ್, ಸೋನು ಗೌಡ, ರಾಕೇಶ್ ಮಯ್ಯ, ಉಗ್ರಂ ಮಂಜು. ಚಿತ್ರದ ತಾರಾಬಳಗಲ್ಲಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಡೆಯುವ ಕ್ರೈಂ ಥ್ರಿಲ್ಲರ್ ಸಿನಿಮಾ ಟೆನೆಂಟ್. ಬಾಡಿಗೆದಾರ ಹಾಗೂ ಮಾಲೀಕನ ನಡೆಯುವ ಕಥೆ ಚಿತ್ರದಲ್ಲಿದೆ.

ಮನೋಹರ್ ಜೋಶಿ ಛಾಯಾಗ್ರಹಣ, ಗಿರೀಶ್ ಒತ್ತೂರು ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ಬ್ಯಾನರ್ ನಡಿ ಟಿ.ನಾಗರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Related Posts

error: Content is protected !!