ಏನಾಯ್ತೋ ಕಾಣೆ ಹಾಡಿಗೆ ಶಶಿಕುಮಾರ್‌ ಪುತ್ರ ಸ್ಟೆಪ್ಪು! ಶೂಟಿಂಗ್‌ ಮುಗಿಯುವ ಹಂತದಲ್ಲಿ ಓ ಮೈ ಲವ್‌ ಚಿತ್ರ

ಶಶಿಕುಮಾರ್‌ ಅವರ ಪುತ್ರ ಅಕ್ಷಿತ್‌ ಶಶಿಕುಮಾರ್‌ ಅಭಿನಯದ “ಓ ಮೈ ಲವ್”‌ ಈಗ ಶೇ.೯೦ರಷ್ಟು ಚಿತ್ರೀಕರಣ ಪೂರ್ಣಗೊಳಿಸಿದೆ. ಇತ್ತೀಚೆಗೆ “ಏನಾಯ್ತೋ ಕಾಣೆ, ತಂಗಾಳಿ ಸುರಿದಂತೆ ತಂಪಾದೆ ನಾನುʼ ಎಂಬ ಹಾಡನ್ನು ಚಿತ್ರೀಕರಿಸಲಾಗಿದೆ. ಗೀತ ಸಾಹಿತಿ ನಾಗೇಂದ್ರ ಪ್ರಸಾದ್‌ ಅವರು ಬರೆದ ಈ ಗೀತೆಯನ್ನು ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಹೀರೋ ಅಕ್ಷಿತ್‌ ಶಶಿಕುಮಾರ್‌ ಜೊತೆ ಕೀರ್ತಿ ಕಲ್ಕರೆ, ದೀಪಿಕಾ ಆರಾಧ್ಯ, ಅಕ್ಷತಾ, ಶೌರ್ಯ, ಸುವೇದ್‌ ಈ ಹಾಡಲ್ಲಿ ಕಾಣಿಸಿಕೊಂಡಿದ್ದಾರೆ. ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಶೂಟಿಂಗ್‌ ಮಾಡಲಾಗಿದೆ. ಸದ್ಯ ಮೂರು ಹಾಡುಗಳ ಚಿತ್ರೀಕರಣ ಮಾತ್ರ ಚಿತ್ರತಂಡ ಬಾಕಿ ಉಳಿಸಿಕೊಂಡಿದೆ.


ಜಿಸಿಬಿ. ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಜಿ. ರಾಮಾಂಜಿನಿ ಕಥೆ ಬರೆದು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಈ ಚಿತ್ರಕ್ಕೆ “ಸ್ಮೈಲ್” ಶ್ರೀನು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದೊಂದು ಲವ್‍ಸ್ಟೋರಿ ಆಗಿದ್ದರೂ ಕಾಮಿಡಿ, ಸೆಂಟಿಮೆಂಟ್ ಜೊತೆಗೆ ಭರ್ಜರಿ ಆಕ್ಷನ್‍ಗೂ ಅಷ್ಟೇ ಪ್ರಾಮುಖ್ಯತೆ ನೀಡಲಾಗಿದೆ. ಚಿತ್ರದಲ್ಲಿ ಹಿರಿಯ ನಿರ್ದೇಶಕ ಎಸ್.ನಾರಾಯಣ್ ಹಾಗೂ ತೆಲುಗು ಖಳನಟ ದೇವ್‍ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವುದಲ್ಲದೆ ಜಿ.ರಾಮಾಂಜಿನಿ ಅವರಂಥ ಸದಭಿರುಚಿಯ ನಿರ್ಮಾಪಕರು ಹಾಗೂ ಪಾತ್ರಕ್ಕೆ ನ್ಯಾಯ ಒದಗಿಸುವಂಥ ಕಲಾವಿದರು ಸಿಕ್ಕಿರುವುದು ನನ್ನ ಅದೃಷ್ಟ ಎನ್ನುತ್ತಾರೆ ನಿರ್ದೇಶಕ ಸ್ಮೈಲ್ ಶ್ರೀನು.

ಚಿತ್ರದ ಕಥೆ ಹಾಗೂ ನಿರೂಪಣೆಗೆ ಒತ್ತು ಕೊಡುವುದರೊಂದಿಗೆ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಂಡು ಸಿನಿಮಾ ಮಾಡುತ್ತಿರುವ ಸ್ಮೈಲ್ ಶ್ರೀನು, ಈ ಸಲವೂ ಹೊಸಬರ ಜೊತೆ ಅನುಭವಿ ಕಲಾವಿದರೊಂದಿಗೆ ಕೆಲಸ ಮಾಡಿದ್ದಾರೆ.
ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತವಿದೆ. ಹಾಲೇಶ್ ಎಸ್. ಛಾಯಾಗ್ರಹಣ ಮಾಡಿದರೆ, ರಿಯಲ್ ಸತೀಶ್ ಸಾಹಸ, ನಾಗೇಂದ್ರ ಪ್ರಸಾದ್ ಸಾಹಿತ್ಯ, ಮುರಳಿ ಅವರ ನೃತ್ಯ ನಿರ್ದೇಶನವಿದೆ. ಡಿ.ಮಲ್ಲಿ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ.

ಹಿರಿಯ ನಿರ್ದೇಶಕ ಎಸ್.ನಾರಾಯಣ್, ಅಕ್ಷಿತ್ ಶಶಿಕುಮಾರ್, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ್, ಸಾಧುಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ, ಶಿಲ್ಪಾ, ರವಿ ರಾಮ್‍ಕುಮಾರ್ ಸೇರಿದಂತೆ ಇತರರು ಚಿತ್ರದಲ್ಲಿದ್ದಾರೆ.

Related Posts

error: Content is protected !!