ಭಾವಚಿತ್ರ ಮೂಲಕ ಭಾವನೆಗಳ ಅನಾವರಣ; ಯಾನ ಹುಡುಗ ಚಕ್ರವರ್ತಿ ಹೀರೋ ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷ್ಮಣ್ ನಾಯಕಿ

ಗಿರೀಶ್ ಕುಮಾರ್ ಬಿ ಕಥೆ ಬರೆದು ನಿರ್ದೇಶಿಸಿರುವ ಚಿತ್ರ “ಭಾವಚಿತ್ರ”. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮುಂತಾದ ಕಡೆ 55ದಿನಗಳ ಚಿತ್ರೀಕರಣವಾಗಿದೆ.

ಈ ಹಿಂದೆ ” ಆವಾಹಯಾಮಿ” ಚಿತ್ರ ನಿರ್ದೇಶಿಸಿದ್ದ, ಗಿರೀಶ್ ಕುಮಾರ್ ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು‌. ನಿರ್ದೇಶಕರೆ ಕಥೆ ಬರೆದಿದ್ದಾರೆ. ಗಿರೀಶ್ ಕುಮಾರ್ – ಗಿರೀಶ್ ಬಿಜ್ಜಳ ಸೇರಿ ಚಿತ್ರಕಥೆ ರಚಿಸಿದ್ದಾರೆ.

ಮೊಬೈಲ್ ಬಂದಾಗಿನಿಂದ ಎಲ್ಲರಿಗೂ “ಭಾವಚಿತ್ರ” ದ ಮೇಲೆ ಹೆಚ್ಚಿನ ಒಲವು. ಕ್ಯಾಮೆರಾ ಹಾಗೂ ಭಾವಚಿತ್ರದ ಮೇಲೆ ನಮ್ಮ ಚಿತ್ರದ ಕಥೆ ಸಾಗುತ್ತದೆ. ಇದನ್ನು ಟೆಕ್ನೋ ಥ್ರಿಲ್ಲರ್ ಅಂತಲೂ ಕರೆಯಬಹುದು. ಇದಷ್ಟೇ ಅಲ್ಲ. ಪ್ರೀತಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್ ಕುಮಾರ್.

Wood creepers ಸಂಸ್ಥೆ ನಿರ್ಮಾಣದ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಶಿವು ಬೇರಗಿ ಹಾಗೂ ವಿಶ್ವಜಿತ್ ರಾವ್ ಬರೆದಿರುವ ಹಾಡುಗಳಿಗೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ಅಜೇಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಚಕ್ರವರ್ತಿ, ಗಾನವಿ ಲಕ್ಷ್ಮಣ್, ಅವಿನಾಶ್, ಕಾರ್ತಿಕ್ ಸುಂದರಂ, ಗಿರೀಶ್ ಬಿಜ್ಜಳ ಮುಂತಾದವರು ಈ ಚಿತ್ರದಲ್ಲಿದ್ದಾರೆ.

Related Posts

error: Content is protected !!