ದಿಗಂತ್ ಅಭಿನಯದ “ಹುಟ್ಟು ಹಬ್ಬದ ಶುಭಾಶಯಗಳು” ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದು, ಡಿಸೆಂಬರ್ 31ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನಲ್ಲಿ ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಾಣ ಮಾಡಿದ್ದಾರೆ.
ನಾಗರಾಜ್ ನಿರ್ದೇಶನದ ಈ ಚಿತ್ರಕ್ಕೆ ದಿಗಂತ್ ಅವರಿಗೆ ನಾಯಕಿಯಾಗಿ ಕವಿತಾ ಗೌಡ ಅಭಿನಯಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ನಟಿಸಿದ್ದಾರೆ.
ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಚಿತ್ರಕ್ಕಿದೆ.