ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾರರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಜನವರಿ ಅಥವಾ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಹೆಚ್. ಪಿ. ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.
ಉದಯ್ ಮೆಹ್ತಾ ಅವರು ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಪ್ರಥಮ್ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡನ್ನು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.
ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಗೂ ಅರಸು ಅಂತಾರೆ ಹಾಡುಗಳನ್ನು ರಚಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಈಗ ಡಿಐ ನಡೆಯುತ್ತಿದೆ.
ಪ್ರಥಮ್ ಅವರೊಂದಿಗೆ ಹಿರಿಯ ನಟ ಸಾಯಿಕುಮಾರ್ ಸಹ ನಟಿಸಿದ್ದಾರೆ. ಡಕೋಟ ಎಕ್ಸ್‌ಪ್ರೆಸ್ ನ ನಂತರ ಓಂಪ್ರಕಾಶ್ ರಾವ್ ನಟಿಸಿರುವ ಕಾಮಿಡಿ ಚಿತ್ರವಿದು. ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಇದ್ದಾರೆ.