ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಕ್ಲಾಪ್ ಮಾಡಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .
ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ.
ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದಲ್ಲಿದ್ದಾರೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.