ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಫಸ್ಟ್ ಪ್ರಿಂಟ್ ರೆಡಿಯಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.
ಪ್ರಸ್ತುತ ಚಿತ್ರಮಂದಿರಗಳಿಗೆ ಐವತ್ತರಷ್ಟು ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮುಂದಿನ ನಿಲುವನ್ನು ನೋಡಿಕೊಂಡು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಹೇಳಿದ್ದಾರೆ. ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್” ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಆ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ಡು ಗೊತ್ತೇ ಇದೆ.
ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ. ಹಾರರ್ , ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ . ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನವಿದೆ.