ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಮತ್ತು ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್” ಈಗಾಗಲೇ ರಿಲೀಸ್ ಆಗಲು ರೆಡಿಯಾಗಿದೆ.
ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಬನಾರಸ್ ಚಿತ್ರತಂಡ ಹೊಸ ಪೋಸ್ಟರ್ ಅನಾವರಣಗೊಳಿಸಿದೆ.
ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಸಿನಿರಸಿಕರಿಗೆ ಮಕರ ಸಂಕ್ರಮಣದ ಶುಭಾಶಯ ಹೇಳಿದೆ. ಸಾಕಷ್ಟು ನಿರೀಕ್ಷೆ ಹೊಂದಿರವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಈ ಚಿತ್ರಕ್ಕೆ ಸಂಕಲನ ಮಾಡಿದ್ದಾರೆ.