ಯುವರಾಜ ಈಗ ‘ಯುದುವೀರ’… ನಿಖಿಲ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೈಟಲ್- ಫಸ್ಟ್ ಲುಕ್ ರಿವೀಲ್!

ನಿಖಿಲ್​ ಕುಮಾರ್ ಇಂದು ಬರ್ತ್​ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್​ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಯುವರಾಜ ಈಗ ಯದುವೀರ!

ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ಯದುವೀರ ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ಕೂಡ ಅನಾವರಣ ಮಾಡಲಾಗಿದೆ.

ಯದುವೀರ ಸಿನಿಮಾಗೆ ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಇದ್ದಾರೆ. ಯಶ್​ ನಟನೆಯ ‘ಮಾಸ್ಟರ್‌ ಪೀಸ್‌’, ಶಿವರಾಜ್​ಕುಮಾರ್​ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬ ಈ ಚಿತ್ರದ ಟೈಟಲ್ ಇಂದು ಘೋಷಣೆ ಆಗಿದೆ. ಜತೆಗೆ ಫಸ್ಟ್ ಪೋಸ್ಟರ್ ಕೂಡ ರಿಲೀಸ್​ ಆಗಿದೆ. ಈ ಮೂಲಕ ನಿಖಿಲ್​ ಬರ್ತ್​ಡೇಗೆ ಅಭಿಮಾನಿಗಳಿಗೆ ಚಿತ್ರತಂಡದಿಂದ ಗಿಫ್ಟ್​ ಸಿಕ್ಕಿದೆ.

ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಯದುವೀರ್ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಸದ್ಯದಲ್ಲಿಯೇ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

Related Posts

error: Content is protected !!