ಹೊಸಬರ ಸಿನಿಮಾಗಳು ದಿನ ಕಳೆದಂತೆ ಶುರುವಾಗುತ್ತಿವೆ. ಆ ಸಾಲಿಗೆ ಈಗ “ಖಡಕ್ ಹಳ್ಳಿ ಹುಡುಗರು” ಎಂಬ ಸಿನಿಮಾ ಕೂಡ ಸೇರಿದೆ. ಹೌದು, ಈ ಚಿತ್ರ ಮಾರ್ಚ್ನಲ್ಲಿ ಅಧಿಕೃತವಾಗಿ ಶುರುವಾಗಲಿದೆ. ಅದಕ್ಕೂ ಮುನ್ನ ಈ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಸಿನಿಮಾ ಕೆಲಸಗಳಿಗೆ ಚಾಲನೆ ಕೊಡಲಾಗಿದೆ. ಹೌದು, ಈ ಚಿತ್ರಕ್ಕೆ ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಅದರಲ್ಲೂ ಅದು ಕನ್ನಡದ ಮೇಲಿರುವ ಹಾಡನ್ನು ರಾಘಣ್ಣ ಹಾಡಿದ್ದಾರೆ. “ಕನ್ನಡಕ್ಕೆ ಮೊದಲ ಗೌರವ” ಹಾಡನ್ನು ನಿರ್ಮಾಪಕ ರೆಹಮಾನ್ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಈ ಹಾಡು ಪಿಆರ್ಕೆ ಆಡಿಯೋ ಮೂಲಕ ಹೊರಬಂದಿದೆ. ಬಹುತೇಕ ಹೊಸಬರೇ ಸೇರಿ ಮಾಡಿರುವ ಈ ಸಿನಿಮಾಗೆ ಎಂ.ಯು.ಪ್ರಸನ್ನ ನಿರ್ದೇಶಕರು. ಹಳ್ಳಿ ಹಿನ್ನೆಲೆಯಿಂದ ಬಂದಿರುವ ಪ್ರಸನ್ನ ಅವರಿಗೆ ಪೋಷಕರ ಬೆಂಬಲವಿದೆ. ಆ ಕಾರಣದಿಂದಲೇ ಪ್ರಸನ್ನೆ ನಿರ್ದೇಶನದತ್ತ ವಾಲಿದ್ದಾರೆ.
ಈ ಕುರಿತು ಹೇಳಿಕೊಂಡ ಪ್ರಸನ್ನ, “ನಾನು ಮೂಲತಃ ಹಳ್ಳಿಯವನು. ಕೊರೊನಾ ಲಾಕ್ ಡೌನ್ ವೇಳೆ ಹುಟ್ಟಿದ ಕಥೆಯಿದು. ಪಕ್ಕಾ ಹಳ್ಳಿ ಸೊಗಡಿನ ಸಿನಿಮಾ. ಎಂಟು ಮುಖ್ಯ ಪಾತ್ರಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇನೆ. ಚಿತ್ರದಲ್ಲಿ ಆರು ಹಾಡುಗಳಿವೆ. ಆರು ಹಾಡುಗಳನ್ನು ನಾನೇ ಬರೆದಿದ್ದೇನೆ. ಅದರಲ್ಲಿ “ಕನ್ನಡಕ್ಕೆ ಮೊದಲ ಗೌರವ” ಎಂಬ ಮೊದಲ ಹಾಡನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಅವರಿಗೆ ಧನ್ಯವಾದ ಹೇಳ್ತೀನಿ. ಈ ಹಾಡನ್ನು ಹಾಡುವಂತೆ ರಾಘಣ್ಣ ಅವರಿಗೆ ಪ್ರೇರಿಪಿಸಿದ ಪುನೀತ್ ರಾಜಕುಮಾರ್ ಅವರಿಗೆ ವಿಶೇಷ ಧನ್ಯವಾದ ಅರ್ಪಿಸುತ್ತೇನೆ. ಅಪ್ಪು ಅವರ ಪಿ.ಆರ್.ಕೆ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಮಾರ್ಚ್ ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದರು ನಿರ್ದೇಶಕ ಪ್ರಸನ್ನ.
ಚಿತ್ರಕ್ಕೆ ರಾಜೀವ್ ರಾಥೋಡ್ ಹೀರೋ. ಅವರು ಸಿನಿಮಾ ಬಗ್ಗೆ ಹೇಳಿದ್ದು ಹೀಗೆ. “ನನ್ನ ನೋಡಿದರೆ ಹಳ್ಳಿ ಹುಡುಗನ ತರಹ ಕಾಣುವುದಿಲ್ಲ. ನಿರ್ದೇಶಕರು ನನಗೆ ಹಳ್ಳಿಹುಡುಗನ ಗೆಟಪ್ ಹಾಕಿ ನೋಡಿ ಆಯ್ಕೆ ಮಾಡಿಕೊಂಡರು. ಈಗ ಬಿಡುಗಡೆಯಾಗಿರುವ ಹಾಡು ಇಷ್ಟು ಚೆನ್ನಾಗಿ ಬಂದಿದೆ ಅಂದರೆ ಪುನೀತ್ ಸರ್ ಕಾರಣ. ಅವರ ಸಹಾಯ ಮರೆಯುವಂತಿಲ್ಲ. ಎಂಬುದು ನಾಯಕ ರಾಜೀವ್ ರಾಥೋಡ್ ಮಾತು.
ಅಂದು ನಟ ಧರ್ಮ ಕೂಡ ಹೊಸಬರ ಸಿನಿಮಾಗೆ ಶುಭಕೋರಲು ಆಗಮಿಸಿದ್ದರು. ಈ ಸಿನಿಮಾಗೆ ಒಳ್ಳೆಯದಾಗಲಿ ಎಂದ ಧರ್ಮ, “ನಾನು ರಾಜೀವ್ ಬಹು ದಿನಗಳ ಸ್ನೇಹಿತರು. ಈ ಚಿತ್ರದ ಕಥೆ ಚೆನ್ನಾಗಿದೆ. ನೀವು ಒಂದು ಪಾತ್ರ ಮಾಡಬೇಕೆಂದು ಕೇಳಿದ್ದಾರೆ. ಮಾಡುತ್ತೇನೆ. ಚಿತ್ರತಂಡಕ್ಕೆ ಶುಭವಾಗಲಿ ಎಂದರು ನಟ ಧರ್ಮ.
ಅಂದು ಪ್ರಭಾಸ್ ರಾಜ್, ಚಂದ್ರ ಪ್ರಭ, ದೀಪು ವಿಜಯ್, ವರದರಾಜ್, ಉದಯ್, ಮಹಂತೇಶ್, ಆರ್ ಎಂ ಎಂ ಮಂಜು, ನಾಯಕಿಯರಾದ ರಾನ್ವಿ ಶೇಖರ್, ದೀಪಿದ್ದರು. ಸಿಂಹ ಮತ್ತು ಪುನೀತ್ ಪಟೇಲ್ ನಿರ್ಮಾಪಕರು. ಸುಧೀರ್ ಶಾಸ್ತ್ರಿ ಹಾಗೂ ಧ್ರುವ ಸಂಗೀತ ನಿರ್ದೇಶಕರು. ಪಿ.ಎಲ್ ರವಿ ಛಾಯಾಗ್ರಹಣ ಮಾಡಲಿದ್ದಾರೆ.