‘ಬಜಾರ್’ ಹುಡುಗ ಧನ್ವೀರ್ ಮತ್ತು ‘ಕಿಸ್’ ಬ್ಯೂಟಿ ಶ್ರೀಲೀಲಾ ನಟನೆಯ ‘ಬೈ ಟು ಲವ್’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಹರಿ ಸಂತೋಷ್ ನಿರ್ದೇಶನದ ಈ ಸಿನಿಮಾ ಸಾಕಷ್ಟು ಕುತೂಹಲ ಹುಟ್ಟು ಹಾಕಿತ್ತು. ಪೋಸ್ಟರ್, ಟೀಸರ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ನಿರೀಕ್ಷೆಯ ಚಿಟ್ಟೆಯಂತಿದ್ದ ಬೈ ಟು ಲವ್ ಕಹಾನಿ ಕಣ್ತುಂಬಿಕೊಳ್ಳೋದಿಕ್ಕೆ ದಿನಗಣನೆ ಶುರುವಾಗಿದೆ.
ಫೆಬ್ರವರಿ 25ಕ್ಕೆ ಬೈ ಟು ಲವ್ ತೆರೆಗೆ!
ಬೈ ಟು ಲವ್ ಸಿನಿಮಾ ಬೆಳ್ಳಿಪರದಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದೇ ತಿಂಗಳ 25ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ಧನ್ವೀರ್ ಹಾಗೂ ಶ್ರೀಲೀಲಾ ಜೋಡಿ ಅದ್ಭುತವಾಗಿ ಮೂಡಿ ಬಂದಿದೆ. ‘ಬಜಾರ್’ನಲ್ಲಿ ಮಾಸ್ ಲುಕ್‌ನಲ್ಲಿ ಮಿಂಚಿದ್ದ ಧನ್ವೀರ್, ಈ ‘ಬೈ ಟು ಲವ್’ನಲ್ಲಿ ಲವರ್ ಬಾಯ್ ಪಾತ್ರ ಮಾಡಿದ್ದಾರೆ. ಶ್ರೀಲೀಲಾ ಮುದ್ದು ಮುದ್ದಾಗಿ ಮಲೆನಾಡ ಹುಡ್ಗಿಯಾಗಿ ಕಾಣಿಸಿಕೊಂಡಿದ್ದಾರೆ. ಗಣೇಶ್ ನಟನೆಯ ಸಖತ್, ನಿಖಿಲ್ ಕುಮಾರ್‌ಸ್ವಾಮಿ ನಟನೆಯ ಯದುವೀರ ಸಿನಿಮಾ ಹಾಗೂ ಜೋಗಿ ಪ್ರೇಮ್-ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾಗಳನ್ನು ನಿರ್ಮಿಸುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್ ನಡಿ ನಿಶಾ ವೆಂಕಟ್ ಕೋಣಂಕಿ ‘ಬೈ ಟು ಲವ್’ಗೆ ನಿರ್ಮಾಣ ಮಾಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಹಾಗೂ ಯೋಗಾನಂದ್ ಸಂಭಾಷಣೆ ಈ ಚಿತ್ರಕ್ಕಿದೆ.
ಲೀಲು-ಬಾಲು ಟ್ರ್ಯಾಕ್ ಹಿಟ್!
ಬೈ ಟು ಲವ್ ಸಿನಿಮಾದ ಯಾರು ಏನಾದ್ರೂ ಅಂದ್ಕೊಂಡ್ಲಿ ಏನಂತೆ.. ಹಾಡು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದೆ. ಧನ್ವೀರ್ ಮತ್ತು ಶ್ರೀಲೀಲಾ ಅವರ ಮುದ್ದು ಮುದ್ದು ತುಂಟಾಟಗಳನ್ನೇ ಕೊರಿಯೋಗ್ರಫಿ ಮಾಡಲಾಗಿದೆ. ನಿರ್ದೇಶಕ ಹರಿ ಸಂತೋಷ್ ಸಾಹಿತ್ಯ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಮಾನೋ ಕಂಠಸಿರಿಯಲ್ಲಿ ಮೂಡಿ ಬಂದಿರುವ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಕ್ತಿದೆ.